
14 ವರ್ಷಗಳ ಹಿಂದೆ ಆರಂಭಗೊಂಡ ಕಾಮಗಾರಿ ಪೂರ್ಣಗೊಂಡು ಮೇ ೧೬ ಪ್ರಾಯೋಗಿಕ ಚಾಲನೆ ನೀಡಲಾಯಿತು. ಶಾಸಕ ಎಸ್. ಅಂಗಾರ ಬ್ರೇಕರ್ ಆನ್ ಮಾಡಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಳಿಯ ಕೇಶವ ಭಟ್, ರಾಕೇಶ್ ರೈ ಕೆಡೆಂಜಿ, ಬಳಕೆದಾರರ ವೇದಿಕೆ ಸಂಚಾಲಕ ಜಯಪ್ರಸಾದ್ ಜೋಶಿ ಬೆಳ್ಳಾರೆ ಹಾಗೂ ಮೆಸ್ಕಾಂ ಅಧಿಕಾರಿಗಳು ಉಪಸ್ಥಿತರಿದ್ದರು.
ದಶಕಗಳ ಹಿಂದಿನ ಬೇಡಿಕೆಯಾದ ಮಾಡಾವು 110 ಕೆ.ವಿ. ವಿದ್ಯುತ್ ಸಬ್ ಸ್ಟೇಷನ್ ಕಾಮಗಾರಿ ಹಲವಾರು ಅಡೆತಡೆಗಳಿಂದ ಕುಂಟುತ್ತಾ ಸಾಗಿತ್ತು. ಬಳಕೆದಾರ ವೇದಿಕೆ ವತಿಯಿಂದ ಹಲವಾರು ಹೋರಾಟ ನಡೆದದ್ದನ್ನು ಇಲ್ಲಿ ಸ್ಮರಿಸಬಹುದು.