ಕೊರೊನಾ ವೈರಸ್ ಹೋಗಲಾಡಿಸಲು ವಿಧಿಸಿದ್ದ ಲಾಕ್‍ಡೌನ್ ಅನ್ನು ಸರಕಾರ ಕೆಲ ನಿಯಮವನ್ನು ಜಾರಿಗೆ ತರುವ ಮೂಲಕ ಹಂತ ಹಂತವಾಗಿ ಸಡಿಲಗೊಳಿಸುತ್ತಿದೆ. ಇದರ ಭಾಗವಾಗಿ ಮದುವೆ ಸಮಾರಂಭಗಳಿಗೂ ಕೆಲ ನಿಯಮಗಳನ್ನು ಸರ್ಕಾರ ಜಾರಿಗೆ ತಂದಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.ವೈರಸ್ ತಡೆಗಟ್ಟುವ ಸಲುವಾಗಿ ಮುಂಜಾಗೃತಾ ಕ್ರಮಕ್ಕಾಗಿ ಸರ್ಕಾರ ಈ ಕೆಳಗಿನ ನಿಯಮಗಳನ್ನು ಜಾರಿಗೆ ತಂದಿದೆ.
- ಮದುವೆ ಸಮಾರಂಭ ಗಳಿಗೆ ಸ್ಥಳೀಯ ಆಡಳಿತ ಸಂಸ್ಥೆಗಳ ಅನುಮತಿ ಕಡ್ಡಾಯವಾಗಿ ಪಡೆಯಬೇಕು.
- ಒಂದು ಮದುವೆಯಲ್ಲಿ 50 ಜನಕ್ಕಿಂತ ಹೆಚ್ಚು ಜನ ಸೇರುವ ಹಾಗಿಲ್ಲ.
- ಮದುವೆಗಳಲ್ಲಿ ಯಾವುದೇ ರೀತಿಯ ಹವಾ ನಿಯಂತ್ರಕ ಬಳಸುವಂತಿಲ್ಲ
- ಗರ್ಭಿಣಿಯರು, 65 ವರ್ಷ ಮೇಲ್ಪಟ್ಟ ವೃದ್ಧರು, 10 ವರ್ಷದೊಳಗಿನ ಮಕ್ಕಳಿಗೆ ಪ್ರವೇಶ ನಿರ್ಬಂಧ.
- ಕಂಟೈನ್ಮೆಂಟ್ ವಲಯದವರಿಗೆ ಮದುವೆಗೆ ಹೋಗಲು ನಿಷಿದ್ಧ
- ಮದುವೆ ಸ್ಥಳಗಳ ಪ್ರವೇಶ ದ್ವಾರದಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಕಡ್ಡಾಯವಾಗಿ ಮಾಡಬೇಕು.
- ಸೂಕ್ತ ಸಾರ್ವಜನಿಕ ಸ್ಥಳ ಮತ್ತು ಸ್ವಚ್ಛ ನೈಸರ್ಗಿಕ ವಾತಾವರಣ ಇರುವೆಡೆ ಮಾತ್ರ ಮದುವೆ ನಡೆಯಬೇಕು.
- ಮದುವೆಗೆ ಬರುವವರು ಮಾಸ್ಕ್ ಕಡ್ಡಾಯವಾಗಿ ಹಾಕಿರಬೇಕು.
- ಎಲ್ಲರಿಗೂ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯವಾಗಿ ಮಾಡಬೇಕು. ಜ್ವರ, ಕೆಮ್ಮು, ನೆಗಡಿ, ಉಸಿರಾಟ ಸಮಸ್ಯೆ ಇರುವವರು ಹೋಗುವುದು ನಿಷಿದ್ಧ.
- ಒಂದು ಮೀಟರ್ ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು.
- ಸಾಬೂನಿನಲ್ಲಿ ಹ್ಯಾಂಡ್ ವಾಷ್ ಗೆ ವ್ಯವಸ್ಥೆ ಮಾಡಿರಬೇಕು.
- ಸಾರ್ವಜನಿಕವಾಗಿ ಉಗುಳುವಂತಿಲ್ಲ. ಮದ್ಯ, ಪಾನ್, ಗುಟ್ಕಾ, ತಂಬಾಕು ಸೇವನೆ ನಿಷಿದ್ಧ.
- ಮದುವೆಗಳಲ್ಲಿ ಒಬ್ಬ ನೋಡಲ್ ಅಧಿಕಾರಿಯಿರುವುದು ಕಡ್ಡಾಯವಾಗಿ ಇರಬೇಕು.
- ಮದುವೆಗೆ ಬಂದ ಅತಿಥಿಗಳ ವಿವರ ನೋಡಲ್ ಅಧಿಕಾರಿಗೆ ಸಲ್ಲಿಸಬೇಕು.
- ಮದುವೆಗೆ ಬರುವವರು ಆರೋಗ್ಯ ಸೇತು ಆಪ್ ಡೌನ್ ಲೋಡ್ ಮಾಡಿಕೊಳ್ಳಬೇಕು.