ಜೂನ್ 25 ರಿಂದ ಜುಲೈ 4ರವರೆಗೆ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ. ಇಂಗ್ಲೀಷ್, ಗಣಿತ ,ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ಗಳಿಗೆ ಒಂದೊಂದು ದಿನದ ಅಂತರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಹೇಳಿದರು.
ಹಾಗೂ ಪಿಯುಸಿ ಯಲ್ಲಿ ಬಾಕಿ ಉಳಿದಿರುವ ಇಂಗ್ಲೀಷ್ ಪರೀಕ್ಷೆಯನ್ನು ಜೂನ್ 18 ಕ್ಕೆ ನಡೆಸಲಾಗುವುದು ಎಂದರು.
ಒಂದು ತಿಂಗಳ ಬಳಿಕ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ