ಮೇ ೨೩ : ಕರ್ನಾಟಕ ರಾಜ್ಯದಲ್ಲಿ ಇಂದು ಒಟ್ಟು ೧೯೬ ಸೋಂಕಿತರು ಪತ್ತೆಯಾಗಿದ್ದು ಆತಂಕ ಹೆಚ್ಚಾಗಿದೆ.
ಕರಾವಳಿ ಪ್ರದೇಶದಲ್ಲಿ ಮುಂದುವರೆದ ಕೊರೊನ ಅಟ್ಟಹಾಸ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ಕೊರೊನ ಪ್ರಕರಣ ದೃಢವಾಗಿ ದಕ್ಷಿಣದಲ್ಲಿ ಎರಡು ಉಡುಪಿಯಲ್ಲಿ ಐದು ಪ್ರಕರಣ ದಾಖಲಾಗಿದೆ.
ಉಸಿರಾಟದ ಸಮಸ್ಯೆ ಇದ್ದ ಬೆಳ್ತಂಗಡಿ ಶಿರ್ಲಾಲು ಮೂಲದ 41 ವರ್ಷದ ಮಹಿಳೆ ಮತ್ತು ಮಹಾರಾಷ್ಟ್ರ ದಿಂದ ಆಗಮಿಸಿ ಕ್ವಾರಂಟೈನ್ ನಲ್ಲಿ ಇದ್ದ 30 ವರ್ಷದ ಯುವಕನಿಗೆ ಕೊರೋನಾ ಕಾಣಿಸಿಕೊಂಡಿದೆ. ಈ ಮೂಲಕ ದ.ಕ.ಜಿಲ್ಲೆಯಲ್ಲಿ ಪಾಸಿಟಿವ್ ಸಂಖ್ಯೆ 65 ಕ್ಕೆ ಏರಿಕೆಯಾಗಿದೆ.ಹಾಗೆ ಉಡುಪಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 55ಕ್ಕೆ ಏರಿಕೆಯಾಗಿದೆ.