ಪಂಜ ಲಾಕ್ ಡೌನ್ ನಿಯಮ ಇಂದು ಕಟ್ಟುನಿಟ್ಟಾಗಿ ಇದ್ದು ಅನಗತ್ಯ ಓಡಾಟಕ್ಕೆ ಅವಕಾಶವಿಲ್ಲ. ಅಗತ್ಯ ವಸ್ತುಗಳಾದ ಹಾಲು, ತರಕಾರಿ, ಮಾಂಸ, ಮೆಡಿಕಲ್ ಮುಂತಾದ ಅಂಗಡಿ ಮುಂಗಟ್ಟುಗಳು ತೆರೆದಿದೆ.
ಕಡಬ ಕ್ರಾಸ್ ಬಳಿ ಪೋಲಿಸ್ ಸಿಬ್ಬಂದಿಗಳನ್ನು ನಿಯೋಜಿಸಿದ್ದಾರೆ. ಇಲ್ಲಿ ಓಡಾಡುವ ಎಲ್ಲಾ ವಾಹನಗಳನ್ನು ತಪಾಸಣೆ ನಡೆಸಲಾಗುತ್ತದೆ. ಅನಗತ್ಯ ಓಡಾಟ ನಡೆಸುವವರಿಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.