
ಕೊಲ್ಲಮೊಗ್ರ ಗ್ರಾಮದ ಗಡಿಕಲ್ಲು ವಿಷ್ಣುಮೂರ್ತಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ಭರದಿಂದ ನಡೆಯುತ್ತಿದ್ದು, ಶಿಲೆಯಿಂದ ಗುಡಿಯ ಗೋಡೆ ರಚನೆ ಕೆಲಸ ಪೂರ್ಣಗೊಂಡಿದೆ.
ಮುಂದಿನ ಫೆಬ್ರವರಿಯಲ್ಲಿ ಬ್ರಹ್ಮಕಲಶ ನಡೆಯಲು ತೀರ್ಮಾನಿಸಲಾಗಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಜಯಪ್ರಕಾಶ್ ಕಟ್ಟ ಹಾಗೂ ಆಡಳಿತ ಸಮಿತಿ ಅಧ್ಯಕ್ಷ ದಿನೇಶ್ ಕುಮಾರ್ ಮಡ್ತಿಲ ತಿಳಿಸಿದ್ದಾರೆ. ಭಕ್ತಾಧಿಗಳು ಈ ಸೇವಾ ಕಾರ್ಯದಲ್ಲಿ ತೊಡಗಿಕೊಳ್ಳಲು ವಿನಂತಿಸಿದ್ದಾರೆ.