ರೈತ ಸಂಘ ಮತ್ತು ಹಸಿರು ಸೇನೆಯ ವತಿಯಿಂದ ಮೇ 27 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ರೈತರು, ಕೃಷಿಕೂಲಿಗಾರರು ಹಾಗೂ ಗ್ರಾಮೀಣ ಕಸುಬುದಾರರ ಸಂಕಷ್ಟದ ತಕ್ಷಣದ ಪರಿಹಾರಕ್ಕೆ ಆಗ್ರಹಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಕರೋನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಯೊಂದಿಗೆ ಪ್ರತಿಭಟನಾ ಸಭೆ
ನಡೆಸಿ ಸಹಾಯಕ ಕಮೀಷನರ್ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ 20 ಅಂಶಗಳ ಒತ್ತಾಯ ಪತ್ರವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ,ಜಿಲ್ಲಾಧ್ಯಕ್ಷರಾದ ಓಸ್ವಾಲ್ಡ್ ಪ್ರಕಾಶ್ ಪೆರ್ನಾಂಡಿಸ್, ಜಿಲ್ಲಾ ಕಾರ್ಯದರ್ಶಿ ಪ್ರಸಾದ್ ಶೆಟ್ಟಿ ಪೆರಾಬೆ, ಜಿಲ್ಲಾ ಉಪಾಧ್ಯರಾದ ದಿವಾಕರ ಪೈ ಮಜಿಗುಂಡಿ,ಬಂಟ್ವಾಳ ತಾಲೂಕು ಅಧ್ಯಕ್ಷರಾದ ಪ್ರೇಮನಾಥ ಶೆಟ್ಟಿ ಬಾಳ್ತಿಲ,ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು, ತಾಲೂಕು ಸಂಚಾಲಕರಾದ ಸೆಬಾಸ್ಟಿಯನ್, ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ರಮ್ಲಾ ಪಿಜಕೊಡಂಗೆ, ಅರಂತೊಡು-ತೋಡಿಕಾನ ವಲಯ ಅಧ್ಯಕ್ಷರಾದ ತೀರ್ಥರಾಮ ಪೆರ್ನೋಜಿ,ಲೋರೆಟ್ಟೊ ವಲಯ ಪ್ರಧಾನ ಕಾರ್ಯದರ್ಶಿ ವಿವಿಯನ್ ಪಿಂಟೋ ಹಾಗೂ ಪ್ರಮುಖ ಪದಾಧಿಕಾರಿಗಳಯ ಉಪಸ್ಥಿತರಿದ್ದರು.