ಕೊರೋನಾ ಮಹಾಮಾರಿ ವೈರಸ್ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳುಗಳಿಂದ ಮುಚ್ಚಲ್ಪಟ್ಟ ಎಲ್ಲಾ ಧಾರ್ಮಿಕ ಕೇಂದ್ರಗಳ ದ್ವಾರಗಳು ತೆರೆಯಲು ಮುಖ್ಯಮಂತ್ರಿ ಯಡಿಯೂರಪ್ಪ ಮನಸ್ಸು ಮಾಡಿದ್ದಾರೆ.
ಜೂನ್ 1ರಿಂದ ಪೂಜಾ ಕಾರ್ಯಕ್ರಮಗಳಿಗೆ ದೇವಸ್ಥಾನಗಳಿಗೆ ಅನುಮತಿ ನೀಡಲು ತೀರ್ಮಾನಿಸಲಾಗಿದೆ ಮಸೀದಿ ಚರ್ಚುಗಳನ್ನು ತೆರೆಯುವ
ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳವಾರದಂದು ಹೇಳಿಕೆಯನ್ನು ನೀಡಿದ್ದರು.ಇದೇ ವಿಷಯಕ್ಕೆ ಪೂರಕವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ರವರು ವಿಧಾನಸೌಧದ ಆವರಣದಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಪುಣ್ಯತಿಥಿ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗಾಗಲೇ ದೇವಸ್ಥಾನಕ್ಕೆ ತೆರೆಯಲು ಅನುಮತಿ ನೀಡಲಾಗಿದೆ ಇದು ಚರ್ಚ್ ಮತ್ತು ಮಸೀದಿಗಳಿಗೆ ಅನ್ವಯಿಸುತ್ತದೆ ಎಂದು ಹೇಳಿದ್ದಾರೆ. ಧಾರ್ಮಿಕ ಕೇಂದ್ರಗಳಲ್ಲಿ ಭಕ್ತರು
ಕೊರೋನವೈರಸ್ ಹರಡದಂತೆ ಸರ್ಕಾರದ ನಿಯಮಾವಳಿ ಪಾಲಿಸುವುದರ ಜೊತೆಗೆ ಜನರು ಸಾಕಷ್ಟು ಮುನ್ನೆಚ್ಚರಿಕೆ ವಹಿಸಿಕೊಳ್ಳಬೇಕು. ಸಾಮಾಜಿಕ ಅಂತರ ಕಾಪಾಡುವುದು, ಸ್ಯಾನಿಟೈಸರ್ ಬಳಸಿಕೊಳ್ಳುವುದು, ಭಕ್ತರ ಸಂಖ್ಯೆಯಲ್ಲಿ ನಿಯಂತ್ರಣ ಕಾಪಾಡಿಕೊಳ್ಳುವುದು ಮುಖ್ಯ ಎಂದು ಈ ಸಂದರ್ಭದಲ್ಲಿ ಅವರು ಹೇಳಿದರು.