ಕಳೆದ ಎರಡು ವರ್ಷಗಳ ಹಿಂದೆ ಕೊಡಗಿನ ಹಾಗೂ ದಕ್ಷಿಣಕನ್ನಡ ಜಿಲ್ಲೆ ಕೇರಳದ ಕೆಲವು ಭಾಗಗಳಲ್ಲಿ ಭಾರಿ ಮಳೆ ಉಂಟಾಗಿದ್ದು ಹಲವಾರು ಕಡೆಗಳಲ್ಲಿ ಭೂಕುಸಿತ ಉಂಟಾಗಿ ಮನೆಗಳನ್ನು ಕಳೆದುಕೊಂಡು ಹಲವಾರು ಕುಟುಂಬಸ್ಥರು ನಿರಾಶ್ರಿತರಾಗಿದ್ದರು.ಈ ಸಂದರ್ಭದಲ್ಲಿ ನಿರಾಶ್ರಿತರಿಗೆ ಸೂರು ಕಲ್ಪಿಸುವ ಅಡಿಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕೊಡಗಿನ ಕೆಲವು ಕಡೆಗಳಲ್ಲಿ ನಿರಾಶ್ರಿತರಿಗೆ ಮನೆಗಳನ್ನು ನಿರ್ಮಿಸುವ ಯೋಜನೆಯನ್ನು ರೂಪಿಸಿಕೊಂಡು ಮನೆ ನಿರ್ಮಾಣದ ಕಾರ್ಯ ಆರಂಭ ಗೊಳಿಸಿತು. ಆದರೆ ಮನೆಗಳನ್ನು ಹಸ್ತಾಂತರಿಸುವ ಕೆಲಸ ನಡೆಯದೆ ಕಾರಣಾಂತರಗಳಿಂದ ಮುಂದೂಡಲ್ಪಟ್ಟಿತ್ತು.ಇದೀಗ ಮನೆಯನ್ನು ಹಸ್ತಾಂತರಿಸಲು ಮುಂದಾಗಿರುವ ಸರ್ಕಾರ ಇದೇ ಬರುವ ಜೂನ್ 4 ರಂದು ಗುರುವಾರ ಬೆಳಗ್ಗೆ 11 ಗಂಟೆಗೆ ಸೋಮವಾರ ಪೇಟೆ ತಾಲೂಕಿನ ಮಾದಾಪುರ ಜಂಬೂರು ಗ್ರಾಮದಲ್ಲಿ ಮತ್ತು ಅಂದು ಮಧ್ಯಾಹ್ನ12.30 ಗಂಟೆಗೆ ಮದೆ ಗ್ರಾಮದಲ್ಲಿ ಸಂತ್ರಸ್ಥರಿಗೆ ಮನೆ ಹಸ್ತಾಂತರ ಕಾರ್ಯಕ್ರಮವು
ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ರವರ ನೇತೃತ್ವದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ. ಮುಖ್ಯಮಂತ್ರಿ ಪಾಲ್ಗೊಳ್ಳುವಿಕೆ ಬಗ್ಗೆ ಇನ್ನೂ ಖಚಿತ ಮಾಹಿತಿ ತಿಳಿದು ಬಂದಿಲ್ಲ.
2018 ರ ಮಹಾಮಳೆಯಿಂದ ಮನೆಗಳನ್ನು ಕಳೆದುಕೊಂಡಿದ್ದ ಸಂತ್ರಸ್ಥರಿಗೆ ಎರಡು ವರ್ಗಗಳ ಬಳಿಕ ಕೊನೆಗೂ ಸರ್ಕಾರ ದಿಂದ ದೊರಕುತ್ತಿರುವ ಮನೆಗಳು
463 ಮನೆಗಳ ಹಸ್ತಾಂತರಕ್ಕೆ ಸಿದ್ದತೆಗೊಂಡಿದ್ದು ಫಲಾನುಭವಿಗಳು ಆ ಸಂತೋಷದ ಕ್ಷಣಕ್ಕಾಗಿ ಕಾಯುತ್ತಿದ್ದಾರೆ.