
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ ಮೇ 30ರಂದು ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಸಭಾಂಗಣದಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಅಧ್ಯಕ್ಷತೆ ವಹಿಸಿದ್ದರು.ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ರಾಗಿ ಜೂನ್ 7 ರಂದು ಡಿ ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮಾಹಿತಿ ನೀಡಿದರು. ವೇದಿಕೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ , ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಕೆ ಪಿ ಸಿ ಸಿ ಮಾಜಿ ಕಾರ್ಯದರ್ಶಿಗಳಾದ ಭರತ್ ಮುಂಡೋಡಿ, ಎಂ. ವೆಂಕಪ್ಪ ಗೌಡ, ಕೆ ಪಿ ಸಿ ಸಿ ವೀಕ್ಷಕ ಕೃಷ್ಣಪ್ಪ, ಡಿ ಸಿ ಸಿ ವೀಕ್ಷಕ ಮಹೇಶ್ ರೈ ನಾಯಕರಾದ ನಿತ್ಯಾನಂದ ಮುಂಡೋಡಿ, ಪಿ ಸಿ ಜಯರಾಮ್ ವೇದಿಕೆ ಯಲ್ಲಿ ಉಪಸ್ಥಿತರಿದ್ದರು. ಸುಳ್ಯ ಬ್ಲಾಕ್ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.