ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಮಹಿಳಾ ಅರೋಗ್ಯ ಸಹಾಯಕಿಯಾದ ಶ್ರೀಮತಿ ರೇವತಿ ಐ . ಬೊಳ್ಳಾಜೆಯವರು ವೃತ್ತಿ ಬದುಕಿನಿಂದ ನಿವೃತ್ತರಾಗಿದ್ದಾರೆ . ಐವತ್ತೊಕ್ಲು ಗ್ರಾಮದ ಬೊಳ್ಳಾಜೆಯವರಾಗಿದ್ದು , ಪ್ರಸ್ತುತ ದೇವಚಳ್ಳ ಗ್ರಾಮದ ಅಡ್ಡನಪಾರೆಯಲ್ಲಿ ನೆಲೆಸಿರುವ ಪ್ರಗತಿಪರ ಕೃಷಿಕ ವಸಂತಕುಮಾರ್ ಬೊಳ್ಳಾಜೆಯವರ ಪತ್ನಿಯಾಗಿರುವ ರೇವತಿ ಐ.ಯವರು 1982 ರಲ್ಲಿ ಕಾರ್ಕಳ ತಾಲೂಕಿನ ಬೆಳುವಾಯಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯಕ್ಕೆ ಸೇರಿದರು . ಆ ಬಳಿಕ ಸುಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರ , ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರ , ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರ , ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಒಟ್ಟು 37 ವರ್ಷ 11 ತಿಂಗಳು ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ . ಇವರ ಹಿರಿಯ ಮಗ ದಿವೀಶ್ ಬೊಳ್ಳಾಜೆ ಬೆಂಗಳೂರಿನ ಬ್ಯಾಂಕ್ ಆಫ್ ಬರೋಡಾ ಶಾಖೆಯ ಅಸಿಸ್ಟೆಂಟ್ ಮೆನೇಜರ್ ಆಗಿದ್ದು , ರಾಷ್ಟ್ರೀಯ ಕಬಡ್ಡಿ ಆಟಗಾರ , ರಾಜ್ಯ ಕಬಡ್ಡಿ ತಂಡದ ಸದಸ್ಯರಾಗಿ ಭಾಗವಹಿಸಿದ್ದಾರೆ . ಕಿರಿಯ ಮಗ ರಾಜೇಶ್ ಬೊಳ್ಳಾಜೆ ಬೆಂಗಳೂರಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದಾರೆ .
- Thursday
- November 21st, 2024