ರಾಜ್ಯ ಸರಕಾರ ಕೊರೊನಾ ಸೋಂಕು ಹರಡುತ್ತಿರುವ ಬೆನ್ನಲ್ಲೇ ಶಾಲೆಗಳನ್ನು ಆರಂಭಿಸಲು ಆದೇಶ ಹೊರಡಿಸಿದೆ. ರಾಜ್ಯ ಸರಕಾರದ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಪೋಷಕರು ಸಹಿ ಸಂಗ್ರಹ ಅಭಿಯಾನ ಜೊತೆಗೆ ಆನ್ ಲೈನ್ ಅಭಿಯಾನವನ್ನು ಕೈಗೊಂಡಿದ್ದಾರೆ. ಪೋಷಕರ ಅಭಿಯಾನಕ್ಕೀಗ ಬಾರೀ ಬೆಂಬಲ ವ್ಯಕ್ತವಾಗಿದೆ.
ಜೂನ್ 5ರಿಂದಲೇ ಶಾಲೆಗಳನ್ನು ಪುನರಾರಂಭ ಮಾಡುವ ಕುರಿತು ಶಿಕ್ಷಣ ಇಲಾಖೆ ಈಗಾಗಲೇ ಆದೇಶ ಹೊರಡಿಸಿದ್ದು, ಜೂನ್ 8ರಿಂದ ದಾಖಲಾತಿ ಮಾಡಿಕೊಳ್ಳುವಂತೆ ಸೂಚನೆಯನ್ನು ನೀಡಿದೆ. ಅಲ್ಲದೇ ಜೂನ್ 1ರಿಂದಲೇ ಶಾಲೆಗಳನ್ನು ಹಂತ ಹಂತವಾಗಿ ಆರಂಭಿಸಲು ಮುಂದಾಗಿದೆ. ಪ್ರೌಢ ಹಾಗೂ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವುದರಿಂದ ಕೊರೊನಾ ಸೋಂಕು ಮಕ್ಕಳಿಗೆ ವ್ಯಾಪಿಸುತ್ತೆ ಅನ್ನೋ ಆತಂಕ ಪೋಷಕರದ್ದು. ಕೊರೊನಾ ಸೋಂಕು ಹರಡುವ ಆತಂಕದಿಂದ ಸರಕಾರಗಳು 10 ವರ್ಷದೊಳಗಿನ ಮಕ್ಕಳನ್ನು ಮನೆಯಿಂದ ಹೊರಗೆ ಬರಬಾರದು ಅಂತಾ ಆದೇಶ ಹೊರಡಿಸಿ ಇದೀಗ ಮಕ್ಕಳನ್ನು ಶಾಲೆಗೆ ಕರೆತರಲು ಮುಂದಾಗಿದೆ. ಇದೇ ಕಾರಣಕ್ಕೆ ರಾಜ್ಯ ಸರಕಾರದ ಕ್ರಮಕ್ಕೆ ರಾಜ್ಯದಾದ್ಯಂತ ಬಾರೀ ಆಕ್ರೋಶಕ್ಕೆ ಕಾರಣವಾಗಿದೆ. ಶಿಕ್ಷಣ ಇಲಾಖೆ ಶಾಲೆಗಳ ಆರಂಭಕ್ಕೆ ಚಾಲನೆ ನೀಡುತ್ತಿದ್ದಂತೆಯೇ ಪೋಷಕರು ತಮ್ಮ ಮಕ್ಕಳನ್ನು ಯಾವುದೇ ಕಾರಣಕ್ಕೂ ಶಾಲೆಗೆ ಕಳುಹಿಸುವುದಿಲ್ಲಾ ಅನ್ನೋ ಅಭಿಯಾನವನ್ನು ಕೈಗೊಂಡಿದ್ದಾರೆ.
ಬೆಂಗಳೂರಿನಲ್ಲಿ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ವಿರೋಧಿಸುತ್ತಿದ್ದಾರೆ. ದಿನಂಪ್ರತಿ 300ಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗುತ್ತಿವೆ. ಇಂತಹ ಸಂದರ್ಭದಲ್ಲಿ ಶಾಲೆಗಳನ್ನು ತೆರೆಯುವ ಸರಕಾರದ ನಿರ್ಧಾರ ಸರಿಯಲ್ಲ. ಜುಲೈನಲ್ಲಿ ಶಾಲೆಗಳನ್ನು ತೆರೆಯುವ ಮೂಲಕ ಬೆಂಕಿಯೊಂದಿಗೆ ಸರಸವಾಡೋದಕ್ಕೆ ಹೊರಟಿದೆ. ಹೀಗಾಗಿ ಪೋಷಕರು ಈಗಾಗಲೇ ಸಹಿ ಸಂಗ್ರಹ ಅಭಿಯಾನವನ್ನು ಕೈಗೊಂಡಿದ್ದಾರೆ. ಎಂದು ತಿಳಿದುಬಂದಿದೆ. ಕೇವಲ 2 ದಿನಗಳ ಅವಧಿಯಲ್ಲಿ ಬರೋಬ್ಬರಿ 5ಲಕ್ಷಕ್ಕೂ ಅಧಿಕ ಪೋಷಕರು ರಾಜ್ಯ ಸರಕಾರ ಕ್ರಮದ ವಿರುದ್ದ ಸಹಿಸಂಗ್ರಹಿಸಲಾಗಿದೆ. ಶಾಲೆಗಳಲ್ಲಿ ಪಾಠ ಮಾಡುವ ಬದಲು ಡಿಜಿಟಲ್ ಶಿಕ್ಷಣಕ್ಕೆ ಒತ್ತು ನೀಡುವಂತೆ ಆಗ್ರಹಿಸಿದ್ದಾರೆ.
ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳಲ್ಲಿಯೂ ಅಭಿಯಾನ ಶುರುವಾಗಿದೆ. ನನ್ನ ಮಕ್ಕಳನ್ನು ಶಾಲೆಗೆ ಕಳುಹಿಸಲ್ಲ. ನನಗೆ ನನ್ನ ಮಕ್ಕಳ ಶಿಕ್ಷಣಕ್ಕಿಂತ ಆರೋಗ್ಯ ಮುಖ್ಯ ಅನ್ನುವ ಪೋಸ್ಟರ್ ಬಳಸಿ ಅಭಿಯಾನವನ್ನು ಕೈಗೊಳ್ಳಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ಮಂದಿ ಪೋಸ್ಟ್ ಮಾಡಿ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ಶಾಲೆಗಳನ್ನು ಆರಂಭಿಸುವುದಾದರೂ ಅಕ್ಟೋಬರ್ ನಂತರದಲ್ಲಿ ಕರೊನಾ ಸ್ಥಿತಿಯನ್ನ ನೋಡಿಕೊಂಡು ಆರಂಭಿಸುವಂತೆ ಸಲಹೆ ನೀಡಿದ್ದಾರೆ.
ಕೆಲವು ಪೋಷಕರು ಕೊರೊನಾ ಸೋಂಕು ಶೂನ್ಯವಾಗುವವರೆಗೆ ಶಾಲೆಗಳನ್ನು ಆರಂಭಿಸುವುದು ಬೇಡಾ ಎನ್ನುತ್ತಿದ್ರೆ, ಇನ್ನೂ ಹಲವರು ಕೊರೊನಾ ಸೋಂಕಿಗೆ ಲಸಿಕೆ ಸಿದ್ದವಾಗುವವರೆಗೂ ಶಾಲಾ ಕಾಲೇಜುಗಳನ್ನು ಆರಂಭಿಸುವುದು ಬೇಡಾ ಎಂದಿದ್ದಾರೆ. ಒಟ್ಟಿನಲ್ಲಿ ರಾಜ್ಯ ಸರಕಾರದ ಆತುರದ ನಿರ್ಧಾರ ಇದೀಗ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.