
ಕಳೆದ ಎರಡು ವರ್ಷಗಳ ಹಿಂದೆ ಭೀಕರ ಭೂಕುಸಿತಕ್ಕೆ ಮನೆ-ಮಠ ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದ ನಿರಾಶ್ರಿತರಿಗೆ ರಾಜ್ಯ ಸರ್ಕಾರದ ವತಿಯಿಂದ ಸುಂದರ ಮನೆ ನಿರ್ಮಿಸಿ ಹಸ್ತಾಂತರಿಸುವ ಕಾರ್ಯಕ್ರಮ ಜೂ 4ರಂದು ಸೋಮವಾರಪೇಟೆ ತಾಲೂಕು ಜಂಬೂರುಗ್ರಾಮದಲ್ಲಿ ನಡೆಯಿತು. ಜಂಬೂರು ಗ್ರಾಮದಲ್ಲಿ 383 ಮದೆ ಗ್ರಾಮದಲ್ಲಿ 86 ಮನೆಗಳ ಹಸ್ತಾಂತರ ಕಾರ್ಯಕ್ರಮ ನಡೆಯಿತು.ನೂತನ ಗೃಹ ಅಸ್ಥಾಂತರ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಸರ್ಕಾರದ ವಸತಿ ಸಚಿವ ವಿ ಸೋಮಣ್ಣ ಕಂದಾಯ ಸಚಿವ ಆರ್ ಅಶೋಕ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಶಾಸಕ ಕೆ ಜಿ ಬೋಪಯ್ಯ ಮಡಿಕೇರಿ ವಿಧಾನಸಭಾ ಕ್ಷೇತ್ರ ಶಾಸಕ ಅಪ್ಪಚ್ಚುರಂಜನ್, ಸಂಸದ ಪ್ರತಾಪ್ ಸಿಂಹ, ಸಚಿವರುಗಳಿಗೆ ಈ ಸಂದರ್ಭದಲ್ಲಿ ಸಾಥ್ ನೀಡಿದರು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾಧಿಕಾರಿ ಅನೀಶ್ ಕಣ್ಮಣಿ ಜಾಯ್, ರಾಜೀವ್ ಗಾಂಧಿ ವಸತಿ ನಿಗಮದ ಇಂಜಿನಿಯರ್ ಶ್ರೀನಿವಾಸ್ ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿಪಿ ಸುಮನ್, ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ರೇಷ್ಮಾ,ಜಿಲ್ಲಾ ಪಂಚಾಯತ್ ಅಧ್ಯಕ್ಷರು ಸದಸ್ಯರುಗಳು, ತಾಲೂಕು ಪಂಚಾಯತ್ ಅಧ್ಯಕ್ಷರು ಸದಸ್ಯರುಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು ಸದಸ್ಯರುಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಉಪಸ್ಥಿತರಿದ್ದರು.
ಹಲವು ವರ್ಷಗಳಿಂದ ಯೋಜನೆಗೆ ಕಾಯುತ್ತಿದ್ದ ಫಲಾನುಭವಿಗಳು ಸಾಕಷ್ಟು ಹೆಚ್ಚಿನ ಪ್ರಮಾಣದಲ್ಲಿ ಉಪಸ್ಥಿತರಿದ್ದರು.
ರಾಜ್ಯ ಸರ್ಕಾರದ ವತಿಯಿಂದ ಹಾಗೂ ಸ್ಥಳೀಯ ಶಾಸಕ ಅಪ್ಪಚ್ಚುರಂಜನ್ ರವರ ನೇತೃತ್ವದಲ್ಲಿ ನಿರ್ಮಾಣಗೊಂಡ ಸುಂದರ ಮನೆಗಳ ಸಾಲುಗಳು ನೋಡುಗರ ಕಣ್ಮನ ಸೆಳೆಯುತ್ತಿತ್ತು.ಈ ಸುಂದರ ಮನೆಗಳ ನಿರ್ಮಾಣಕ್ಕೆ ಸಂಪೂರ್ಣವಾಗಿ ತೊಡಗಿಸಿ ನಿರಾಶ್ರಿತರ ಕೈ ಸೇರುವಲ್ಲಿ ಯಶಸ್ವಿಯಾಗಿ ಸೇವೆಸಲ್ಲಿಸಿದ ಜಿಲ್ಲಾಧಿಕಾರಿಯವರನ್ನು ಸಚಿವರುಗಳು ಶ್ಲಾಘಿಸಿದರು.