ಐವರ್ನಾಡು ವಿಶ್ವ ಪರಿಸರ ದಿನಾಚರಣೆ

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಐವರ್ನಾಡು ಗ್ರಾಮ ಪಂಚಾಯತ್ ಗ್ರಾಮ ವಿಕಾಸ ಸಭಾಭವನದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ .5 ರಂದು ಆಚರಿಸಲಾಯಿತು . ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಬೆಳ್ಳಾರೆ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾದ ಎಸ್.ಎನ್.ಮನ್ಮಥರ ಅಧ್ಯಕ್ಷತೆಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಗ್ರಾಮ ವಿಕಾಸ ಸಭಾಭವನದ ಎದುರು ಗಿಡ ನೆಡಲಾಯಿತು . ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಬಾಲಕೃಷ್ಣ ಕೀಲಾಡಿ , ಸದಸ್ಯರಾದ ಶಾಂತರಾಮ ಕಣಿಲೆಗುಂಡಿ , ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಆಶಾ ಕಾರ್ಯಕರ್ತರು , ಅಂಗನವಾಡಿ ಕಾರ್ಯಕರ್ತೆಯರು , ಕಿರಿಯ ಆರೋಗ್ಯ ಸಹಾಯಕಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದ್ದರು . ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಡಿ.ಶೇಖರ್ ರವರು ಪರಿಸರದ ಪ್ರಾಮುಖ್ಯತೆ ಮತ್ತು ಪರಿಸರ ನಾಶದಿಂದಾಗುವ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು . ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ್ವಾಗತಿಸಿ , ವಂದಿಸಿದರು .

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading