
ಕೋವಿಡ್ 19 ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳಿನಿಂದ ಸಂಪೂರ್ಣ ಲಾಕ್ ಡೌನ್ ಗೊಂಡು ಮಸೀದಿಗಳು ಒಳಗೊಂಡಂತೆ ಎಲ್ಲಾ ಧಾರ್ಮಿಕ ಕ್ಷೇತ್ರಗಳು ಮುಚ್ಚಿದ್ದವು. ಇದೀಗ ಲಾಕ್ ಡೌನ್ ಸಡಿಲಿಕೆಯ ಹಿನ್ನೆಲೆಯಲ್ಲಿ ಜೂ. 08 ರಿಂದ ಧಾರ್ಮಿಕ ಕೇಂದ್ರಗಳು ತೆರೆಯಲು ಅನುಕೂಲ ಸಾಧ್ಯತೆ ಇರುವುದರಿಂದ ಅತ್ಯಂತ ಜಾಗರೂಕತೆಯಿಂದ ಅದನ್ನು ಸದುಪಯೋಗ ಪಡಿಸಬೇಕಾಗಿದೆ.
ಈ ನಿಟ್ಟಿನಲ್ಲಿ ಮಸೀದಿಗಳ ಪ್ರಾರ್ಥನೆಯ ಪುನರಾರಂಭಕ್ಕೆ ಸರಕಾರ ಹಾಗೂ ಗೌರವಾನ್ವಿತ ಉಲಮಾಗಳು ಆದೇಶಿಸಿದ ಎಲ್ಲಾ ಸಲಹೆ ಸೂಚನೆಗಳನ್ನು ಕಡ್ಡಾಯವಾಗಿ ಪ್ರತಿಯೊಬ್ಬರೂ ಪಾಲಿಸಬೇಕು
ಆಯಾ ಜಮಾಅತ್ ಆಡಳಿತ ಮಂಡಳಿ ನೇತೃತ್ವದಲ್ಲಿ ಈ ಬಗ್ಗೆ ಜಮಾಅತ್ ಸದಸ್ಯರುಗಳಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳುವ ಮೂಲಕ ಸಮಾಜದ ಹಿತರಕ್ಷಣೆಗೆ ಮುಂದಾಗಬೇಕಿದೆ ಎಂದು ಸುನ್ನೀ ಮ್ಯಾನೇಜ್ಮೆಂಟ್ ಅಸೋಸಿಯೇಷನ್(ಎಸ್ ಎಂ ಎ) ಸುಳ್ಯ ರೀಜನಲ್ ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿಕೊಂಡಿದೆ.