
ಕೋವಿಡ್ 19 ರ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕೆಲವು ಮಾರ್ಗಸೂಚಿ ಗಳೊಂದಿಗೆ ಜೂನ್ 8 ರಿಂದ ಮಸೀದಿಗಳಲ್ಲಿ ಪ್ರಾರ್ಥನೆಗೆ ಅವಕಾಶವನ್ನು ಕಲ್ಪಿಸಿ ಕೊಟ್ಟಿದ್ದರು
ಪ್ರಸಕ್ತ ವಿದ್ಯಮಾನಗಳಲ್ಲಿ ರಾಜ್ಯದಲ್ಲಿ ಕರೊನ ವೈರಸ್ ಅತಿ ಹೆಚ್ಚಾಗಿ ಕಂಡು ಬರುತ್ತಿದ್ದು ಇದರಿಂದ ಮುಂಜಾಗ್ರತಾ ಕ್ರಮವಾಗಿ ಸುಳ್ಯ ಮೊಗರ್ಪಣೆ ಜುಮಾ ಮಸ್ಜಿದ್ ನಲ್ಲಿ ಜುಲೈ ಪ್ರಾರಂಭದವರೆಗೆ ಯಾವುದೇ ಸಾಮೂಹಿಕ ಪ್ರಾರ್ಥನೆಗಳನ್ನು ನಿರ್ವಹಿಸದೆ ಯತಾಸ್ಥಿತಿ ಕಾಯ್ದುಕೊಳ್ಳುವಂತೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಂದಿನ ದಿನಗಳಲ್ಲಿ ಸ್ಥಿತಿ-ಗತಿಗಳನ್ನು ಅರಿತುಕೊಂಡು ಮಸ್ಜಿದ್ ನಲ್ಲಿ ಪ್ರಾರ್ಥನೆ ನಿರ್ವಹಿಸುವ ಬಗ್ಗೆ ಸಭೆ ಸೇರಿ ತೀರ್ಮಾನ ಕೈಗೊಳ್ಳಲಾಗುವುದೆಂದು ತಿಳಿದುಬಂದಿದೆ.