ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಜಾಲ್ಸೂರು ಮತ್ತು ಗ್ರಾಮ ವಿಕಾಸ ಸಮಿತಿ ಕನಕಮಜಲು – ಜಾಲ್ಸೂರು ಇದರ ಜಂಟಿ ಆಶ್ರಯದಲ್ಲಿ ಗ್ರಾಮದ ರೈತರಿಗೆ ತರಕಾರಿ ಬೀಜಗಳ ವಿತರಣಾ ಕಾರ್ಯಕ್ರಮವು ಜಾಲ್ಸೂರು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜೂ.10ರಂದು ಜರುಗಿತು.
ಜಾಲ್ಸೂರು ಗ್ರಾ.ಪಂ. ಉಪಾಧ್ಯಕ್ಷ ದಿನೇಶ್ ಅಡ್ಕಾರು ಅಧ್ಯಕ್ಷತೆ ವಹಿಸಿದ್ದರು.
ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು, ಮಂಗಳೂರು ಸ್ಕ್ಯಾಡ್ಸ್ ಪೂರ್ವಾಧ್ಯಕ್ಷ ಜಯರಾಮ ರೈ ಜಾಲ್ಸೂರು, ಜಾಲ್ಸೂರು ಗ್ರಾ.ಪಂ. ಸದಸ್ಯ ಜನಾರ್ದನ ಆಚಾರ್ಯ ಜಾಲ್ಸೂರು,
ಸುಳ್ಯ ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ನಾರಾಯಣ ಬೊಮ್ಮೆಟ್ಟಿ, ಜಾಲ್ಸೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಎಂ. ಬಾಬು ಕದಿಕಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಳ್ಯ ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಪಾಡಿ ಅವರು ತರಕಾರಿ ಬೀಜ ವಿತರಣೆಯ ಕುರಿತು ರೈತರಿಗೆ ಮಾಹಿತಿ ನೀಡಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿ, ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಗ್ರಾಮದ ರೈತರು ತರಕಾರಿ ಬಿತ್ತನೆ ಬೀಜಗಳನ್ನು ಪಡೆದುಕೊಂಡರು.