Ad Widget

ಕೊಡಗು ಘನ ವಾಹನ ಸಂಚಾರ ನಿಷೇಧ

ಕೊಡಗು ಜಿಲ್ಲೆಯಲ್ಲಿ 2018-19 ಮತ್ತು 2019-20ನೇ ಸಾಲಿನಲ್ಲಿ ಆದ ಭಾರೀ ಮಳೆಯಿಂದ ಹಲವು ಭಾಗಗಳಲ್ಲಿ ಭೂಕುಸಿತವಾಗಿದ್ದು, ಜೀವಹಾನಿಯೊಂದಿಗೆ ಭಾರೀ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿದೆ.
ಆ ದಿಸೆಯಲ್ಲಿ ಜಿಲ್ಲೆಯ ರಸ್ತೆಗಳು ಭಾರೀ ತಿರುವುಗಳು ಹಾಗೂ ಏರಿಳಿತದಿಂದ ಕೂಡಿದ್ದು, ಪ್ರಸ್ತುತ ಮುಂಗಾರು ಪ್ರಾರಂಭವಾಗಿದೆ. ಮಳೆಯ ಪ್ರಮಾಣ ಹೆಚ್ಚಿದಂತೆ ನೆಲದಲ್ಲಿ ತೇವಾಂಶ ಹೆಚ್ಚಾಗಿ, ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂಕುಸಿತ ಉಂಟಾಗಿ ಅನಾಹುತಗಳಾಗುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಜಿಲ್ಲೆಯ ರಸ್ತೆಗಳು, ಸಾರ್ವಜನಿಕ ಆಸ್ತಿ-ಪಾಸ್ತಿ ರಕ್ಷಣೆ ಹಾಗೂ ಪ್ರಯಾಣಿಕರ ಮತ್ತು ಸಾರ್ವಜನಿಕರ ಸುರಕ್ಷತೆ ಹಿತದೃಷ್ಟಿಯಿಂದ ಜೂನ್ 11 ರಿಂದ ಆಗಸ್ಟ್ 10 ರ ವರೆಗೆ ಸಂಚಾರ ವ್ಯವಸ್ಥೆ ನಿರ್ವಹಿಸಲು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶಿಸಿದ್ದಾರೆ.
ನಿರ್ಬಂಧಿತ ವಾಹನಗಳು: ಎಲ್ಲಾ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು, ವಾಹನದ ನೋಂದಣಿ ತೂಕ 16,200 ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಣೆ ಮಾಡುವ ಸರಕು ಸಾಗಾಣಿಕೆ ವಾಹನಗಳು. ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳು.
ನಿರ್ಬಂಧದಿಂದ ವಿನಾಯಿತಿ ನೀಡಿದ ವಾಹನಗಳು: ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು (ಮಲ್ಟಿ ಆಕ್ಸಿಲ್ ಬಸ್‍ಗಳು ಸೇರಿದಂತೆ) ಈ ಬಗೆಯ ವಾಹನಗಳಿಗೆ ನಿರ್ಬಂಧ ವಿನಾಯಿತಿಯನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!