
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಬೆಳ್ಳಾರೆ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸಭೆ ಇಂದು ಬೆಳ್ಳಾರೆ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಯವರ ಅಧ್ಯಕ್ಷತೆ ಯಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ವೀಕ್ಷಕರಾದ ಕೃಷ್ಣಪ್ಪ ಪಿ, ಜಿಲ್ಲಾ ಕಾಂಗ್ರೆಸ್ ವೀಕ್ಷಕರಾದ ಮಹೇಶ್ ರೈ ಅಂಕೊತ್ತಿಮಾರ್, ಅನಿಲ್ ರೈ ಬೆಳ್ಳಾರೆ, ಚಂದ್ರಶೇಖರ ಕಾಮತ್, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ಧಿಕ್ ಕೊಕ್ಕೊ, ಪ್ರವೀಣ ರೈ ಮರುವಂಜ, ಉಪಸ್ಥಿತರಿದ್ದರು. ಬೆಳ್ಳಾರೆ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಪ್ರಮುಖ ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು.