
ನವದೆಹಲಿ: ಪೂರ್ವ ಲಡಾಕ್‌ನ ಗಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ – ಚೀನಾ ನಡುವೆ 5 ವಾರಗಳಿಂದ ಸೃಷ್ಟಿಯಾಗಿದ್ದ ಗಡಿ ಸಂಘರ್ಷ, ಭೀಕರ ಕಾಳಗಕ್ಕೆ ಕಾರಣವಾಗಿದೆ. ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಇದೀಗ ಕೇಂದ್ರ ಸರ್ಕಾರ ಭಾರತೀಯ ಸೇನೆಗೆ ಗಡಿಯಲ್ಲಿ ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ. ಅಗತ್ಯ ಶಸ್ತ್ರಾಸ್ತ್ರಗಳನ್ನು ಸಿದ್ಧಪಡಿಸಿಕೊಳ್ಳಿ ಎಂದು ಮೂರು ಸೇನೆಗಳಿಗೆ ಸೂಚನೆ ಕೊಡಲಾಗಿದೆ. ಚೀನಾ ಸಂಘರ್ಷಕ್ಕಿಳಿದ ನಂತರ ತಿರುಗೇಟಿಗೆ ಭಾರತ ಸಿದ್ಧವಾಗಿದೆ. ಶಸ್ತ್ರಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್‌ಗೆ ಪರಿಸ್ಥಿತಿ ನಿರ್ವಹಣೆ ಹೊಣೆ ನೀಡಲಾಗಿದೆ ಎಂದು ತಿಳಿದುಬಂದಿದೆ.