Ad Widget

ಸೈನೈಡ್ ಮೋಹನ 20 ನೇ ಪ್ರಕರಣದಲ್ಲೂ ಆರೋಪ ಸಾಬೀತು- ಜೂನ್ ೨೪ ರಂದು ಶಿಕ್ಷೆ ಪ್ರಕಟ

ಕಾಸರಗೋಡಿನ ಯುವತಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲೂ ಸರಣಿ ಸ್ತ್ರೀ ಹಂತಕ , ಸೈನೆಡ್ ಮೋಹನ್ ದೋಷಿ ಎಂದು ನ್ಯಾಯಾಲಯವೊಂದು ತೀರ್ಪು ನೀಡಿದೆ . ಯುವತಿಯರನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ , ಸೈನೈಡ್ ನೀಡಿ ಕೊಲೆಗೈದಿದ್ದ ಆರೋಪದ ಮೇರೆಗೆ ಮೋಹನ್ ವಿರುದ್ಧ 20 ಪ್ರಕರಣಗಳು ದಾಖಲಾಗಿದ್ದವು . 19 ಪ್ರಕರಣಗಳ ವಿಚಾರಣೆ ಮುಗಿದಿದ್ದು , ನಾಲ್ಕು ಪ್ರಕರಣಗಳಲ್ಲಿ ಮರಣ ದಂಡನೆ ಮತ್ತು 15 ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ . ಇದೀಗ 20 ನೇ ಪ್ರಕರಣದ ತೀರ್ಪು ಬಂದಿದ್ದು , ಜೂನ್ 24 ರಂದು ಶಿಕ್ಷೆಯ ಪ್ರಮಾಣ ಪ್ರಕಟವಾಗುವ ಸಾಧ್ಯತೆಯಿದೆ . ಕಾಸರಗೋಡಿನ ಮಹಿಳಾ ಹಾಸ್ಟೆಲ್‌ವೊಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ 25 ವರ್ಷದ ಯುವತಿಗೆ 2009 ರಲ್ಲಿ ಮೋಹನ್ ಪರಿಚಯವಾಗಿತ್ತು . ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿದ್ದ ಅಪರಾಧಿ ಮೂರು ಬಾರಿ ಯುವತಿಯ ಮನೆಗೆ ಭೇಟಿ ನೀಡಿದ್ದ . 2009 ರ ಜುಲೈ 8 ರಂದು ಸುಳ್ಯದ ದೇವಸ್ಥಾನಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ಬಂದಿದ್ದಳು . ಸುಳ್ಯದಿಂದ ಆಕೆಯನ್ನು ಬೆಂಗಳೂರಿಗೆ ಕರೆದೊಯ್ದಿದ್ದ ಮೋಹನ್ , ನಾವು ಮದುವೆ ಆಗಿದ್ದೇವೆ . ಶೀಘ್ರದಲ್ಲೇ ಬರುತ್ತೇವೆ ಎಂದು ಆಕೆಯ ಮನೆಯವರಿಗೆ ನಂಬಿಸಿದ್ದ ಎಂದು ಪೊಲೀಸರು ಆರೋಪಪಟ್ಟಿಯಲ್ಲಿ ತಿಳಿಸಿದ್ದರು . ಬೆಂಗಳೂರಿನ ಲಾಡ್ಜ್ ಒಂದರಲ್ಲಿ ಕೊಠಡಿ ಬಾಡಿಗೆಗೆ ಪಡೆದು ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಮೋಹನ್ , 2009 ಜುಲೈ 15 ರಂದು ಸಮೀಪದ ಬಸ್ ನಿಲ್ದಾಣಕ್ಕೆ ಆಕೆಯನ್ನು ಕರೆದೊಯ್ದು ಗರ್ಭ ನಿರೋಧಕ ಮಾತ್ರೆ ಎಂದು ನಂಬಿಸಿ ಸೈನೈಡ್ ಮಾತ್ರೆ ನೀಡಿದ್ದ . ಶೌಚಾಲಯಕ್ಕೆ ತೆರಳಿ ಅದನ್ನು ಸೇವಿಸಿದ್ದ ಯುವತಿ ಅಲ್ಲಿಯೇ ಕುಸಿದು ಬಿದ್ದಿದ್ದಳು . ಪೊಲೀಸರು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಳು . ಠಾಣೆಯಲ್ಲಿ ಅಪರಿಚಿತ ಯುವತಿಯ ಸಾವಿನ ಪ್ರಕರಣ ದಾಖಲಾಗಿತ್ತು ಎಂದು ಆರೋಪಪಟ್ಟಿ ಉಲ್ಲೇಖಿಸಲಾಗಿತ್ತು .
ಬೆಂಗಳೂರಿನ ಲಾಡ್ಜ್ ಒಂದರಲ್ಲಿ ಕೊಠಡಿ ಬಾಡಿಗೆಗೆ ಪಡೆದು ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಮೋಹನ್ , 2009 ಜುಲೈ 15 ರಂದು ಸಮೀಪದ ಬಸ್ ನಿಲ್ದಾಣಕ್ಕೆ ಆಕೆಯನ್ನು ಕರೆದೊಯ್ದು ಗರ್ಭ ನಿರೋಧಕ ಮಾತ್ರೆ ಎಂದು ನಂಬಿಸಿ ಸೈನೈಡ್ ಮಾತ್ರೆ ನೀಡಿದ್ದ . ಶೌಚಾಲಯಕ್ಕೆ ತೆರಳಿ ಅದನ್ನು ಸೇವಿಸಿದ್ದ ಯುವತಿ ಅಲ್ಲಿಯೇ ಕುಸಿದು ಬಿದ್ದಿದ್ದಳು . ಪೊಲೀಸರು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಳು . ಠಾಣೆಯಲ್ಲಿ ಅಪರಿಚಿತ ಯುವತಿಯ ಸಾವಿನ ಪ್ರಕರಣ ದಾಖಲಾಗಿತ್ತು ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿತ್ತು . 2009 ರ ಅಕ್ಟೋಬರಲ್ಲಿ ಮೋಹನ್‌ಳನ್ನು ಪೊಲೀಸರು ಬಂಧಿಸಿದ್ದರು . ಆ ಬಳಿಕ ಸರಣಿ ಹತ್ಯೆಗಳ ಮಾಹಿತಿ ಹೊರಬಿದ್ದಿತ್ತು . ನಂತರ ಮೃತಳ ಸಹೋದರಿ ಪೊಲೀಸರಿಗೆ ದೂರು ನೀಡಿದ್ದರು . ಹಿಂದಿನ ಪಬ್ಲಿಕ್ ಪ್ರಾಸಿಕ್ಯೂಟರ್ ಜುಡಿತ್ ಒ.ಎಂ. ಕ್ರಾಸ್ತಾ ಮತ್ತು ಈಗಿನ ಪಬ್ಲಿಕ್ ಪ್ರಾಸಿಕ್ಯೂಟರ್ ಜಯರಾಮ ಶೆಟ್ಟಿ ಈ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರವಾಗಿ ವಾದಿಸಿದ್ದರು .

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!