ಗದಗ: ಕೊಡಗು ಜಿಲ್ಲೆಯ ಕೊರೋನಾ ಸೋಂಕಿತ ವ್ಯಕ್ತಿಯೋರ್ವನಿಂದ ಪೊಲೀಸ್ ಠಾಣೆ ಸೀಲ್ ಆಗಿರುವ ಘಟನೆ ಜಿಲ್ಲೆ ಮುಂಡರಗಿನಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಪಿ-9215 ರ ವ್ಯಕ್ತಿ ದಿನಾಂಕ 18 ರಂದು ಖಾಸಗಿ ವಿಷಯಕ್ಕೆ ಸಂಬಂಧಿಸಿಯ ಕೊಡಗು ನಿಂದ ಮುಂಡರಗಿ ಠಾಣೆಗೆ ಬಂದಿದ್ದ. ಆದ್ರೆ ನಿನ್ನೆ ಹೆಲ್ತ್ ಬುಲೆಟಿನ್ ನಲ್ಲಿ ಆ ವ್ಯಕ್ತಿಗೆ ಪಾಸಿಟಿವ್ ದೃಢವಾಗಿದೆ. ಇದರಿಂದ ಪೊಲೀಸ್ ಠಾಣೆಯನ್ನು ಸಂಪೂರ್ಣವಾಗಿ ಸೈನಿಟೆಜರ್ ಮಾಡಲಾಗಿದೆ. ಜೊತೆಗೆ ಪೊಲೀಸ್ ಠಾಣೆ ಒಳಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಠಾಣೆಯ ಸುತ್ತಲು ಬ್ಯಾರಿಕೇಡ್ ಹಾಕಿ, ಸೈನಿಟೆಜರ್ ಅಳವಡಿಸಲಾಗಿದೆ. ಠಾಣೆಯ ಹೊರಭಾಗ ಸಾರ್ವಜನಿಕರ ಸಮಸ್ಯೆ ಆಲಿಸಲು ವ್ಯವಸ್ಥೆ ಮಾಡಲಾಗಿದೆ. ಕೊಡಗಿನ ಸೋಂಕಿತನೊಂದಿಗೆ ಸಂಪರ್ಕದಲ್ಲಿದ್ದ ಪೊಲೀಸ್ ಸಿಬ್ಬಂದಿಗಳು ಹಾಗೂ ಸಾರ್ವಜನಿಕರನ್ನು ಆರೋಗ್ಯ ತಪಾಸಣೆ ಒಳಪಡಿಸಲಾಗಿದೆ. ವರದಿಗಾಗಿ ಜಿಲ್ಲಾಡಳಿತ, ಆರೋಗ್ಯ ಹಾಗೂ ಪೊಲೀಸ್ ಇಲಾಖೆ ಕಾಯುತ್ತಿದೆ. ಈ ಘಟನೆಯಿಂದ ಗದಗ ಜಿಲ್ಲಾ ಪೊಲೀಸ್ ಇಲಾಖೆ ಸಿಬ್ಬಂದಿಗಳಲ್ಲಿ, ಸಾರ್ವಜನಿಕರಲ್ಲಿ ಮತ್ತಷ್ಟು ಆತಂಕ ಮೂಡಿಸಿರುವುದಂತೂ ಸತ್ಯ.
- Sunday
- November 24th, 2024