ಕೊರೋನ ವೈರಸ್ ಲಾಕ್ ಡೌನ್ ನಿಂದಾಗಿ ಜನ ಸಾಮಾನ್ಯರು ಕೆಲಸವಿಲ್ಲದೇ ಒಂದೊತ್ತಿನ ಊಟಕ್ಕೂ ಕಷ್ಟ ಪಡುತ್ತಿರುವ ಸಂಧರ್ಭ ವಾಗಿದೆ ಪ್ರಸಕ್ತ ಸನ್ನಿವೇಶ. ಇಂತಹ ಸಂಕಷ್ಟದ ಸಮಯದಲ್ಲಿ ಲಾಕ್ ಡೌನ್ ಸಮಯದ ಎರಡು ತಿಂಗಳ ವಿದ್ಯುತ್ ಬಿಲ್ಲನ್ನು ಪಾವತಿ ಮಾಡಬೇಕೆಂದು ಜನ ಸಾಮಾನ್ಯರ ಮೇಲೆ ಒತ್ತಡ ಹೇರುತ್ತಿರುವುದು ಉತ್ತಮ ಬೆಳವಣಿಗೆಯಲ್ಲ ಎಂದ ವುಮೆನ್ ಇಂಡಿಯಾ ಮೂಮೆಂಟ್(WIM )
ಇಂತಹ ಕ್ಲಿಷ್ಟಕರ ಸನ್ನಿವೇಶದಲ್ಲಿ ಜನ ಸಾಮಾನ್ಯರೊಂದಿಗೆ ಸರ್ಕಾರ ಕರುಣೆ ತೋರಿ ಲಾಕ್ ಡೌನ್ ಸಂಧರ್ಭದಲ್ಲಿನ ಎರಡು ತಿಂಗಳ ವಿದ್ಯುತ್ ಬಿಲ್ಲನ್ನು ಮನ್ನಾ ಮಾಡಬೇಕೆಂದು ಸಮಿತಿ ವತಿಯಿಂದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಸುಳ್ಯ ಇವರ ಮೂಲಕ ಕರ್ನಾಟಕ ಮುಖ್ಯಮಂತ್ರಿಗೆ ಮನವಿಯನ್ನು ಜೂನ್ 24ರಂದು ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ವಿಮ್ ಜಿಲ್ಲಾಧ್ಯಕ್ಷೆ ನಸ್ರಿಯಾ ಬೆಳ್ಳಾರೆ ಹಾಗೂ ವಿಮ್ ಸುಳ್ಯ ವಿಧಾನಸಭಾ ಸಮಿತಿ ಸದಸ್ಯರಾದ ನಸೀಮ ಪೆರಾಜೆ , ಸಾಜಿದಾ ಪೈಚಾರ್ ಮೊದಲಾದವರು ಉಪಸ್ಥಿತರಿದ್ದರು.
- Thursday
- November 21st, 2024