Ad Widget

ಜೂ.26 : ಐವರ್ನಾಡು ಗ್ರಾ. ಪಂ. ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮ


ದ.ಕ.ಜಿಲ್ಲಾ ಪಂಚಾಯತ್ ಮಂಗಳೂರು,ತಾಲೂಕು ಪಂಚಾಯತ್ ಸುಳ್ಯ,
ಐವರ್ನಾಡು ಗ್ರಾಮ ಪಂಚಾಯತ್ ನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯ ಕ್ರಮವು ಜೂ.26 ರಂದು ನಡೆಯಲಿದೆ.
ಗ್ರಾಮ ವಿಕಾಸ ಮಿನಿಸಭಾಭವನ ವಿಕಾಸ ಭವನವನ್ನು ಶಾಸಕ ಎಸ್.ಅಂಗಾರ,ಘನತ್ಯಾಜ್ಯ ಘಟಕ ಹಾಗೂ ಸ್ಮಶಾನ ಘಟಕಕ್ಕೆ ನೀರು ಸರಬರಾಜು ಯೋಜನೆಯನ್ನು ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ,ಸ್ವಚ್ಛಭಾರತ್ ಮಿಷನ್ ಸಾರ್ವಜನಿಕ ಶೌಚಾಲಯ ಕಟ್ಟಡವನ್ನು ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಪುಷ್ಪಾವತಿ ಬಾಳಿಲ,ಸ್ವಚ್ಛಶ್ರೀ ಘನತ್ಯಾಜ್ಯ ಘಟಕವನ್ನು ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥರವರು ಉದ್ಘಾಟಿಸಲಿದ್ದಾರೆ.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಚೈತ್ರ ಕಟ್ಟತ್ತಾರು ವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಸದಸ್ಯರು,ಹಲವು ಜನ ಗಣ್ಯರು,ಗ್ರಾಮಸ್ಥರು ಉಪಸ್ಥಿತರಿರಲಿದ್ದಾರೆ ಎಂದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಡಿ.ಶೇಖರ್ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading