
ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಪಡೆದ ಸಾಲ ಮನ್ನಾಕ್ಕಾಗಿ, ಹಾಗೂ ವಸೂಲಿಗಾರರ ದಬ್ಬಾಳಿಕೆ ವಿರೋಧಿಸಿ ಜುಲೈ 4 ರಂದು ಸುಳ್ಯ ತಾಲೂಕು ಕಚೇರಿ ಬಳಿ ಸಾಂಕೇತಿಕ ಪ್ರತಿಭಟನೆ ನಡೆಸಲಾಗುವುದು. ಸುಳ್ಯ ತಾಲೂಕು ಪರಿಸರದ ಸಾಲ ಸಂತ್ರಸ್ತ ಮಹಿಳೆಯರು ಪ್ರತಿಭಟನೆ ಯಲ್ಲಿ ಭಾಗವಹಿಸುವಂತೆ ಸಂಘಟಕರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಋಣ ಮುಕ್ತ ಹೋರಾಟ ಸಮಿತಿ ಅಧ್ಯಕ್ಷ ಬಿಎಂ ಭಟ್ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು ಪ್ರತಿಭಟನೆಯಲ್ಲಿ ಜೆಡಿಎಸ್ ರಾಜ್ಯ ಸಮಿತಿ ಉಪಾಧ್ಯಕ್ಷ ಎಂಬಿ ಸದಾಶಿವ ಋಣಮುಕ್ತ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ಎಲ್ ಮಂಜುನಾಥ್ ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .