
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್‌ಪ್ಲಾನ್ ಯೋಜನೆಯಡಿಯ ನಡೆದ ಕಾಮಗಾರಿಗಳಾದ ದೇವಳದ ನೂತನ ಗೋಶಾಲೆ , ಆದಿಸುಬ್ರಹ್ಮಣ್ಯ ಬಳಿ ಇರುವ ನೂತನ ವಸತಿಗೃಹ , ಆದಿಸುಬ್ರಹ್ಮಣ್ಯ ಬಳಿಯ ಪುರುಷ ಹಾಗೂ ಮಹಿಳೆಯರ ಶೌಚಾಲಯ ಕಟ್ಟಡ ಮತ್ತು ಸವಾರಿ ಮಂಟಪ ಬಳಿಯ ಶೌಚಾಲಯ ಕಟ್ಟಡವನ್ನು ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿ ಇಲಾಖೆ ಮತ್ತು ಬಂದರು, ಒಳನಾಡು ಜಲಸಾರಿಗೆ ಹಾಗೂ ದ.ಕ.ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಜೂ 29 ರಂದು ಪೂರ್ವಾಹ್ನ ಗಂಟೆ 11 ಗಂಟೆಗೆ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಶಾಸಕ ಯಸ್.ಅಂಗಾರ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಆಗಮಿಸಲಿದ್ದಾರೆ. ಆದುದರಿಂದ ತಾವುಗಳು ಈ ಕಾರ್ಯಕ್ರಮದಲ್ಲಿ ಮಾಸ್ಕ್ ಧರಿಸಿ,ಸಾಮಾಜಿಕ ಅಂತರ ಕಾಪಾಡಿಕೊಂಡು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ದೇವಸ್ಥಾನದ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.