ಸುಳ್ಯವನ್ನು ಕೊರೊನಾ ಬೆನ್ನು ಬಿಡದೆ ಕಾಡುತ್ತಿದೆ. ಇಂದು ಮತ್ತೆ ಒಂದು ಮಹಾಮಾರಿ ಸೋಂಕು ದೃಢವಾಗಿದೆ. ಸುಳ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಡಬದ ಕೊರೋನಾ ವಾರಿಯರ್ ಗೆ ಕೊರೋನಾ ಸೋಂಕು ತಗುಲಿದೆ.
ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಕೊರೋನಾ ವಾರಿಯರ್, ಸುಳ್ಯದಲ್ಲಿ ಕರ್ತವ್ಯದಲ್ಲಿದ್ದ ನರ್ಸ್ ಓರ್ವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಅವರು ಸುಳ್ಯದಿಂದ ಪ್ರತೀದಿನ ತನ್ನ ಮನೆಗೆ ಬರುತ್ತಿದ್ದರು ಎನ್ನಲಾಗಿದೆ. ಇಂದು ಅವರ ಗಂಟಲ ದ್ರವ ಮಾದರಿ ಪರೀಕ್ಷೆಯು ಪಾಸಿಟಿವ್ ಬಂದಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.
ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನರ್ಸಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಐ.ಸಿ.ಯು. ಘಟಕವನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.