ಜು.16-27: ಪ್ರಥಮ ಪಿಯುಸಿ ಪೂರಕ ಪರೀಕ್ಷೆ

ಕೊರೋನಾ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ರಾಜ್ಯದಲ್ಲಿನ 2019-20ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ ಮೇ.5ರಂದು ಪ್ರಕಟಿಸಲಾಗಿತ್ತು. ಆದರೆ ಅನುತ್ತೀರ್ಣರಾದಂತ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಇದೀಗ ಇಂತಹ ಪ್ರಥಮ ಪಿಯುಸಿ ಪೂರಕ ಪರೀಕ್ಷೆಯನ್ನು ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಜು.16 ರಿಂದ ಜು. 27 ರ ಒಳಗೆ ನಡೆಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.

. . . . . . . . .

ಈ ಕುರಿತಂತೆ ಸುತ್ತೋಲೆ ಹೊರಡಿಸಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು, 2019-20ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಕೋವಿಡ್-19 ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಆರೋಗ್ಯದ ಹಿತದೃಷ್ಠಿಯಿಂದ ಈ ಕೆಳಕಂಡ ಸೂಚನಾಕ್ರಮಗಳನ್ನು ಅನುಸರಿಸಿ, ಕಾಲೇಜು ಹಂತಗಳಲ್ಲಿಯೇ ನಡೆಸಲು ಸೂಚಿಸಿ ಆದೇಶಿಸಿದ್ದಾರೆ.
ಈ ಹಿಂದೆ ಸಾಮಾನ್ಯ ವೇಳಾಪಟ್ಟಿಯನ್ನು ನಿಗದಿಪಡಿಸಿ, ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಪ್ರಥಮ ಪಿಯುಸಿ ಪೂರಕ ಪರೀಕ್ಷೆ ನಡೆಸಿದಲ್ಲಿ, ಎಲ್ಲಾ ಕಾಲೇಜುಗಳ ವಿದ್ಯಾರ್ಥಿಗಳು ಏಕಕಾಲದಲ್ಲಿ ಹೆಚ್ಚಿನ ಸಂಖ್ಯೆಗಳಲ್ಲಿ ಕಾಲೇಜುಗಳಿಗೆ ಬರುವ ಸಾಧ್ಯತೆಗಳಿದ್ದು, ಕೋವಿಡ್ ಸಾಂಕ್ರಾಮಿಕ ರೋಗದ ಕಾರಣ ಪ್ರಸ್ತುತ ಸನ್ನಿವೇಶದಲ್ಲಿ ಆ ರೀತಿ ಏಕಕಾಲದಲ್ಲಿ ಕಾಲೇಜುಗಳಿಗೆ ವಿದ್ಯಾರ್ಥಿಗಳು ಹಾಜರಾಗುವುದನ್ನು ತಪ್ಪಿಸುವ ಉದ್ದೇಶದಿಂದ ಸಾಮಾನ್ಯ ವೇಳಾಪಟ್ಟಿಯಲ್ಲಿ ಹಾಗೂ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಪ್ರಥಮ ಪಿಯುಸಿ ಪೂರಕ ಪರೀಕ್ಷೆಗಳನ್ನು ನಡೆಸದೇ, ಕಾಲೇಜುಗಳ ಹಂತದಲ್ಲಿ ಪ್ರತ್ಯೇಕವಾಗಿ ನಡೆಸಲು ಕ್ರಮವಹಿಸಲಾಗಿದೆ.
ಕೋವಿಡ್-19 ಹಿನ್ನಲೆಯಲ್ಲಿ ಕಾಲೇಜುಗಳ ಹಂತದಲ್ಲಿ ಪ್ರತಿ ಕಾಲೇಜಿಗೂ ಪ್ರತ್ಯೇಕವಾದ ವೇಳಾಪಟ್ಟಿಯನ್ನು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಅನುಕೂಲಕ್ಕೆ ತಕ್ಕಂತೆ ಮತ್ತು ಸ್ಥಳೀಯ ಸನ್ನಿವೇಶಗಳಿಗೆ ಅನುಗುಣವಾಗಿ ವೇಳಾಪಟ್ಟಿಯನ್ನು ಸಿದ್ದಪಡಿಸಿಕೊಂಡು ಪರೀಕ್ಷೆ ನಡೆಸಲು ಸೂಚಿಸಿದ್ದಾರೆ.

. . . . . . .

ಪರೀಕ್ಷಾ ಶುಲ್ಕ

ಒಂದು ವಿಷಯಕ್ಕೆ – ರೂ.101
ಎರಡು ವಿಷಯಗಳಿಗೆ ರೂ.201
ಮೂರು ಮತ್ತು ಹೆಚ್ಚಿ ವಿಷಯಗಳಿಗೆ ರೂ.302
ಈ ಪರೀಕ್ಷಾ ಶುಲ್ಕವನ್ನು ಪ್ರಥಮ ಪಿಯುಸಿಯ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ದಿನಾಂಕ 08-07-2020ರಿಂದ ದಿನಾಂಕ 14-07-2020ರ ಒಳಗಾಗಿ ಪಾವತಿಸುವಂತೆ ಸೂಚಿಸಿದ್ದಾರೆ. ಒಂದು ವೇಳೆ ಈ ದಿನಾಂಕದ ಒಳಗೆ ಪರೀಕ್ಷಾ ಶುಲ್ಕವನ್ನು ವಿದ್ಯಾರ್ಥಿಗಳು ಪಾವತಿಸಲು ಸಾದ್ಯವಾಗದೇ ಇದ್ದಲ್ಲಿ ಪರೀಕ್ಷಾ ದಿನಗಳಂದು ಶುಲ್ಕ ಪಾವತಿಗೂ ಅವಕಾಶವನ್ನು ನೀಡಲಾಗಿದೆ. ಅಲ್ಲದೇ ನಿಗದಿತ ಅವಧಿಯಲ್ಲಿ ಶುಲ್ಕ ಪಾವತಿಸಲು ವಿದ್ಯಾರ್ಥಿಗಳಿಗೆ ಒತ್ತಾಯ ಮಾಡುವಂತಿಲ್ಲ ಎಂಬುದಾಗಿಯೂ ಸೂಚನೆ ನೀಡಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading