ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಇಬ್ಬರು ಸಿಬ್ಬಂದಿಗಳಿಗೂ ಕೊರೋನಾ ಪಾಸಿಟಿವ್ ಬಂದಿರುವುದಾಗಿ ತಿಳಿದುಬಂದಿದೆ. 21 ವರ್ಷದ ಪುರುಷ ಹಾಗೂ 30 ವರ್ಷದ ಮಹಿಳಾ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಹಿನ್ನಲೆಯಲ್ಲಿ ಸಂಪಾಜೆ ಆರೋಗ್ಯ ಕೇಂದ್ರದ ಕ್ವಾಟ್ರಸ್ ಹಾಗೂ ಸಂಪಾಜೆಯ ಕುಟ್ಟಾಳು ಸ್ಥಳವನ್ನು ಕಂಟೈನ್ಮೆಂಟ್ ಝೋನ್ ಎಂದು ಗುರುತಿಸಿ, ಸೀಲ್ ಡೌನ್ ಮಾಡಲಾಗಿದೆ.
ಸುಳ್ಯ ಸರ್ಕಾರಿ ಆಸ್ಪತ್ರೆಯ 6 ಮಂದಿಗೆ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನಲೆಯಲ್ಲಿ ಈ ಪೈಕಿ ಓರ್ವರು ನೆಲೆಸಿರುವ ಪೆರಾಜೆಯ ಇಂದಿರಾ ಆವಾಝ್ ಕಾಲೊನಿಯನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
- Thursday
- October 31st, 2024