ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಜನರಲ್ಲಿ ನಿರಾತಂಕ ಆಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಜಬಳೆ ಸಿಆರ್ ಸಿ ಜನವಸತಿ ಪ್ರದೇಶದಲ್ಲಿ ಕಂಡುಬಂದಿರುವ 2 ಕೊರೋನಾ ಪಾಸಿಟಿವ್ ಪ್ರಕರಣಗಳಿಗೆ ಸಂಬಂಧಿಸಿದ ಪ್ರಥಮ ಸಂಪರ್ಕಿತರ ಮಾದರಿ ಗಂಟಲು ದ್ರವಗಳನ್ನು ಸಂಗ್ರಹಿಸಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಅವರಿಗೆಲ್ಲರಿಗೂ ಕೊರೋನಾ ಕುರಿತ ವರದಿ ನೆಗೆಟಿವ್ ಎಂದು ಬಂದಿರುತ್ತದೆ.
ಈ ಕುರಿತು ಮಾತನಾಡಿರುವ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಡಿ.ಶೇಖರ್ ಈ ಪ್ರಕರಣಕ್ಕೆ ಸಂಬಂಧಿಸಿ ಗ್ರಾಮದ ಜನತೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಅಲ್ಲದೇ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಈಗಾಗಲೇ ತಿಳಿಸಲಾದ ಎಲ್ಲಾ ನಿಯಮಾವಳಿಗಳನ್ನು ಪ್ರತಿಯೊಬ್ಬರು ಪಾಲಿಸುವಂತೆ ಮನವಿ ಮಾಡಿದರು.