ಜೂನ್ 16ರಿಂದ ದ ಕ ಜಿಲ್ಲೆ ಲಾಕ್ಡೌನ್ ಗೊಳ್ಳಲಿದ್ದು ಇದರ ಹಿನ್ನೆಲೆಯಲ್ಲಿ ಇಂದು ತಾಲೂಕು ಪಂಚಾಯತ್ ಸಭಾಭವನದಲ್ಲಿ ಶಾಸಕ ಅಂಗಾರ ಮತ್ತು ಅಧಿಕಾರಿ ವರ್ಗದವರ ನೇತೃತ್ವದ ಸಭೆ ನಡೆಯಿತು. ಸಭೆಯಲ್ಲಿ ಅಧಿಕಾರಿಗಳಿಗೆ ಲಾಕ್ ಡೌನ್ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕಟ್ಟುನಿಟ್ಟಿನ ಕ್ರಮದ ಬಗ್ಗೆ ಮಾಹಿತಿ ನೀಡಿದ ಶಾಸಕ ಅಂಗಾರ ಈ ಬರುವ ಬುಧವಾರ 8 ಗಂಟೆಯಿಂದ ಮುಂದಿನ ಗುರುವಾರ 8 ಗಂಟೆಯವರೆಗೆ ಲಾಕ್ ಡೌನ್ ಸಂಪೂರ್ಣವಾಗಿ ಯಶಸ್ವಿಯಾಗ ಬೇಕಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ತಮ್ಮ ತಮ್ಮ ಮನೆಗಳಿಗೆ ಬೇಕಾದ ಅವಶ್ಯಕ ವಸ್ತುಗಳ ಖರೀದಿಯನ್ನು ನಾಳೆ ಮತ್ತು ನಾಡಿದ್ದು ಎರಡು ದಿನಗಳಲ್ಲಿ ಮಾಡಿ ಮುಗಿಸುವಂತೆ , ಮತ್ತು ಜಾಗೃತಿ ಮೂಡಿಸಲು ನಗರ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಗಳಲ್ಲಿ ಧ್ವನಿ ವರ್ಧಕಗಳನ್ನು ಬಳಸಿ ಪ್ರಚಾರ ಪಡಿಸುವಂತೆ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಅವರಿಗೆ ಸೂಚಿಸಿದರು. ಪೊಲೀಸ್ ಇಲಾಖೆಯು ಕಾನೂನಿನ ರೀತಿನೀತಿಗಳನ್ನು ಸಾರ್ವಜನಿಕರು ಅನುಸರಿಸದೆ ಇದ್ದದ್ದು ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸುಳ್ಯ ಪೊಲೀಸ್ ವೃತ್ತನಿರೀಕ್ಷಕ ನವೀನಚಂದ್ರ ಜೋಗಿ ಅವರಿಗೆ ಸೂಚಿಸಿದರು.
ಈ ವೇಳೆ ಮಾತನಾಡಿದ ಶಾಸಕರು ಸರಕಾರವು ಸಾರ್ವಜನಿಕರ ಹಿತದೃಷ್ಟಿಯನ್ನು ಇಟ್ಟು ಈ ಒಂದು ವಾರಗಳ ಕಾಲ ಲಾಕ್ ಡೌನ್ ಆದೇಶವನ್ನು ಹೊರಡಿಸಿದೆ. ಇದನ್ನು ಸಾರ್ವಜನಿಕರು ಸಂಪೂರ್ಣ ಸಹಕಾರದಿಂದ ಮಾತ್ರ ಸಾಧ್ಯ. ಜನತೆ ತಮ್ಮ ತಮ್ಮ ಆರೋಗ್ಯ ಹಿತದೃಷ್ಟಿಯನ್ನು ಕಾಪಾಡಿ ಕೊಳ್ಳಲು ಸರ್ಕಾರದೊಂದಿಗೆ ಸಂಪೂರ್ಣ ಕೈಜೋಡಿಸುವಂತೆ ವಿನಂತಿಸಿಕೊಂಡರು. ಈ ಸಂದರ್ಭದಲ್ಲಿ ಸುಳ್ಯ ತಹಸಿಲ್ದಾರ್ ಅನಂತ ಶಂಕರ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ವೈದ್ಯಾಧಿಕಾರಿ ಡಾಕ್ಟರ್ ಸುಬ್ರಹ್ಮಣ್ಯ, ಸುಳ್ಯ ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಚಂದ್ರ ಜೋಗಿ, ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ, ನ.ಪಂ ಸದಸ್ಯ ವಿನಯ ಕಂದಡ್ಕ, ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ಮೊದಲಾದವರು ಉಪಸ್ಥಿತರಿದ್ದರು.
- Thursday
- November 28th, 2024