ಕೋವಿಡ್ ಸೋಂಕಿತರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಬಿಪಿಎಲ್, ಎಪಿಲ್ ಕಾರ್ಡ್ ಹೊಂದಿರುವವರು ಮತ್ತು ರೇಶನ್ ಕಾರ್ಡ್ ಇಲ್ಲದವರು, ವಲಸೆ ಕಾರ್ಮಿಕರು ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಎಂದು ಪೂಜಾರಿ ತಿಳಿಸಿದ್ದಾರೆ. ಆಧಾರ್ ಕಾರ್ಡ್ ತೋರಿಸಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ.
ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕೊರೋನಾ ಶಂಕಿತರಿಗೆ ಮತ್ತು ಸೋಂಕು ದೃಢಪಟ್ಟವರಿಗೆ ಉಚಿತ ಚಿಕಿತ್ಸೆ ಮುಂದುವರಿಯಲಿದೆ. ಇದರ
ಜೊತೆಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಸಹ ಉಚಿತವಾದ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿದರು.
ಈ ವೇಳೆ ಮಾತನಾಡಿದ ಅವರು ದ.ಕ. ಜಿಲ್ಲೆಯಲ್ಲಿ ಗುಣಮುಖರಾದವರ ಸಂಖ್ಯೆ ಹೆಚ್ಚಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.