ಸಂವಿಧಾನ ಶಿಲ್ಪಿ,ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ ನಿವಾಸ ರಾಜಗೃಹದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವುದನ್ನು, ಕರ್ನಾಟಕ ದಲಿತ ಸಂಘರ್ಷ ಸಮಿತಿ ತೀವ್ರವಾಗಿ ಖಂಡಿಸುತ್ತದೆ.
ಸ್ವಾತಂತ್ರ್ಯ, ಸಮಾನತೆ, ಸಹೋದರತೆಯ ಭಾವನೆಗಳನ್ನು ಭಾರತದ ಪ್ರಜೆಗಳಲ್ಲಿ ಪ್ರತಿಷ್ಠಾಪಿಸಿದ ಮಹಾನ್ ಚೇತನವನ್ನು ಅಪಮಾನಿಸುವ ಮನಸ್ಥಿತಿಯವರು ಈ ಕಾಲದಲ್ಲೂ ಇದ್ದಾರೆ ಎಂಬುದು ಅತಂಕಕಾರಿ ವಿಷಯವಾಗಿದೆ.ಶಿಕ್ಷಣ ಸಂಘಟನೆ, ಹೋರಾಟ ಎಂಬ ಮೂರು ಧ್ಯೇಯವನ್ನು ಭಾರತೀಯರಿಗೆ ನೀಡಿ ಭಾರತವನ್ನು ಸಾಮಾಜಿಕವಾಗಿ,ಆರ್ಥಿಕವಾಗಿ,ಶೈಕ್ಷಣಿಕವಾಗಿ ಉನ್ನತ ಸ್ಥಾನಕ್ಕೇರಿಸಿದ ಡಾ. ಬಿ ಆರ್ ಅಂಬೇಡ್ಕರ್ ಅವರ ಅಪಮಾನವನ್ನು ಭಾರತೀಯರು ಸಹಿಸುವುದಿಲ್ಲ ಮತ್ತು ಅಪಮಾನಿಸಿದವರನ್ನು ದೇಶ ದ್ರೋಹಿಗಳು ಎಂದು ಪರಿಗಣಿಸಿ ಕಠಿಣ ಶಿಕ್ಷೆ ನೀಡಬೇಕು, ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕೇಂದ್ರ ಸರ್ಕಾರ ಮತ್ತು ಆಯಾಯ ರಾಜ್ಯ ಸರಕಾರಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಪಾಜೆ ಹೋಬಳಿಯ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಹೆಚ್ ಬಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.
- Tuesday
- November 26th, 2024