ಸುಳ್ಯ ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಬಗ್ಗೆ ಸಮಿತಿ ರಚನೆ ಮಾಡಿ ಸರಕಾರ ಆದೇಶಿಸಿದೆ.
ಸಮಿತಿಯ ಅಧ್ಯಕ್ಷರಾಗಿ ಶಾಸಕ ಎಸ್ ಅಂಗಾರ, ಸದಸ್ಯರಾಗಿ ಬಿಜೆಪಿ ಮಂಡಲ ಸಮಿತಿ ಮಾಜಿ ಅದ್ಯಕ್ಷ ವೆಂಕಟ್ ವಳಲಂಬೆ, ಮಾಜಿ ತಾ.ಪಂ.ಅಧ್ಯಕ್ಷೆ ಗುಣವತಿ ಕೊಲ್ಲಂತಡ್ಕ, ಬಿಜೆಪಿ ಎಸ್ ಸಿ ಮೋರ್ಚಾದ ಮಾಜಿ ಅಧ್ಯಕ್ಷ ಕಳಂಜದ ಬಾಳಪ್ಪ ಮಣಿಮಜಲು ಆಯ್ಕೆಯಾಗಿದ್ದಾರೆ. ಸಂಬಂದಪಟ್ಟ ತಹಶೀಲ್ದಾರ್ ಕಾರ್ಯದರ್ಶಿಯಾಗಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಿದೆ.