Ad Widget

ಕೊರೊನ ನಡುವೆ ಬಕ್ರೀದ್ ಆಚರಣೆ-ಸರಕಾರದ ಮಾರ್ಗಸೂಚಿ ಬಿಡುಗಡೆ

ಕೊರೊನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇವೆ. ಈ ಮಧ್ಯೆ ಆಗಸ್ಟ್ 1ರಂದು ಬಕ್ರೀದ್ ಹಬ್ಬ ಆಚರಿಸುವುದಾಗಿ ಹಿಲಾಲ್ ಸಮಿತಿ ಘೋಷಿಸಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಜುಲೈ 31ರಂದೇ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಗೈಡ್​ಲೈನ್ಸ್ ಹೊರಡಿಸಿದೆ.

. . . . . . .

ರಾಜ್ಯ ಸರ್ಕಾರದ ಮಾರ್ಗಸೂಚಿಗಳು..

  1. ಪ್ರಾರ್ಥನಾ ಸ್ಥಳಗಳಲ್ಲಿ ಮಾಸ್ಕ್​ ಕಡ್ಡಾಯವಾಗಿ ಹಾಕಬೇಕು.
  2. 60 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿ ಪ್ರಾರ್ಥನೆ ಮಾಡುವುದು.
  3. ನಮಾಜ್ ನಿರ್ವಹಿಸುವವರ ಮಧ್ಯೆ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳುವುದು.
  4. ಮಸೀದಿಗಳನ್ನು ಪ್ರವೇಶಿಸುವ ಮೊದಲು ದೇಹದ ತಾಪಮಾನವನ್ನು ತಪಾಸಣೆ ಮಾಡುವುದು.
  5. ಕೈಗಳನ್ನು ಸೋಪು ಅಥವಾ ಸ್ಯಾನಿಟೈಜರ್​ನಿಂದ ಶುಚಿಗೊಳಿಸುವುದು.
  6. ಮಸೀದಿಗಳಲ್ಲಿರುವ ಧಾರ್ಮಿಕ ಗ್ರಂಥಗಳನ್ನು ಮುಟ್ಟುವಂತಿಲ್ಲ.
  7. ತಮ್ಮ ತಮ್ಮ ಮನೆಗಳಿಂದ ಮುಸಲ್ಲಾವನ್ನು(ಜಾಯನಮಾಜ್) ಕಡ್ಡಾಯವಾಗಿ ತರುವುದು.
  8. ಹಸ್ತಲಾಘವ ಮತ್ತು ಆಲಿಂಗನ ಮಾಡದಿರಲು ಸೂಚಿಸುವುದು.
  9. ಅಪರಿಚಿತರು ಪ್ರಾರ್ಥನೆ ಸಲ್ಲಿಸಲು ಮಸೀದಿಗೆ ಬಂದಲ್ಲಿ ಅವರ ಬಗ್ಗೆ ವಿಶೇಷ ಗಮನ ಹರಿಸುವುದು.
  10. ಈದ್ಗಾಹ್​ಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಿರ್ಬಂಧ
  11. ಮಸೀದಿಗಳಲ್ಲಿ ಗರಿಷ್ಟ 50 ಜನರು ಮೀರದಂತೆ ಸಾಮೂಹಿಕ ಪ್ರಾರ್ಥನೆ ನಿರ್ವಹಿಸಬಹುದು.
  12. 5 ಹೊತ್ತಿನ ನಮಾಜ್ ನಿರ್ಬಂಧ
  13. ಮಸೀದಿ ಹೊರತುಪಡಿಸಿ ಸಭಾಂಗಣ, ಸಮುದಾಯ ಭವನ, ಶಾದಿ ಮಹಲ್​ ಮತ್ತಿತರ ಜಾಗಗಳಲ್ಲಿ ಸಾಮೂಹಿಕ ಪ್ರಾರ್ಥನೆ ಆಯೋಜಿಸುವಂತಿಲ್ಲ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!