
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕೊರೋನ ವೈರಸ್ ಮಹಾಮಾರಿಯು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಸಾರ್ವಜನಿಕ ಸ್ಥಳಗಳು ಹಾಗೂ ಸರಕಾರಿ ಇಲಾಖಾ ಕಚೇರಿಗಳ ಪರಿಸರಗಳನ್ನು ಸ್ಯಾನಿಟೈಸ್ ಮಾಡಿಕೊಳ್ಳಲಾಗುತ್ತಿದೆ.
ಸಾರ್ವಜನಿಕರು ಹೆಚ್ಚಾಗಿ ವಿವಿಧ ಉದ್ದೇಶಗಳಿಂದ ಪೊಲೀಸ್ ಠಾಣೆಗಳಿಗೆ ಬರುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಇಂದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಠಾಣೆಯ ಒಳಭಾಗ ಮತ್ತು ಹೊರಭಾಗ ಪರಿಸರವನ್ನು ಸ್ಯಾನಿಟೈಸ್ ಮಾಡಲಾಗಿದೆ.