
ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಹಾಗು ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್ ರವರನ್ನು ಕೊಡಗು ಜಿಲ್ಲಾ ಉಸ್ತುವಾರಿ ಮಂಜುಳಾ ರಾಜ್, ಉಸ್ತುವಾರಿ ಕಾರ್ಯದರ್ಶಿ ಯಂ.ವೆಂಕಪ್ಪ ಗೌಡ ಇಂದು ಬೆಂಗಳೂರಿನಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಕಾರ್ಡಿನೇಟರುಗಳಾದ ಕಾವು ಹೇಮನಾಥ ಶೆಟ್ಟಿ, ಎಡ್ವಿನ್ ರಿಚರ್ಡ್, ಕೆ.ಪಿ ರಾಜು, ಪ್ರದೀಪ ರೈ ಪಾಂಬಾರು, ಜಿ ಬಿ ಜಾನ್ ಬೆಂಗಳೂರು ರವರು ಉಪಸ್ಥಿತರಿದ್ದರು. ಈ ಹಿಂದೆ ನಡೆದ ಕೆಪಿಸಿಸಿ ಅಧ್ಯಕ್ಷರು ಹಾಗು ಕಾರ್ಯಾಧ್ಯಕ್ಷರುಗಳ ಪದಗ್ರಹಣ ಕಾಯ್ರಕ್ರಮದ ಬಗ್ಗೆ ಹಾಗೂ ಮುಂದೆ ನಡೆಯಲಿರುವ ಅರೋಗ್ಯ ಹಸ್ತ ಕಾಯ್ರಕ್ರಮದ ಪೂರ್ವ ತಯಾರಿ ಬಗ್ಗೆ ಮತ್ತು ಕೊಡಗು ಜಿಲ್ಲೆಯ ಪ್ರಸಕ್ತ ರಾಜಕೀಯ ವಿದ್ಯಮಾನದ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.