Ad Widget

ಇಂದಿನ ಪರಿಸ್ಥಿತಿಯಲ್ಲಿ ಮಾಧ್ಯಮವನ್ನು ಅನುಮಾನದ ದೃಷ್ಟಿಯಲ್ಲಿ ಜನಸಾಮಾನ್ಯನು ನೋಡುವಂತಾಗಿದೆ: ತಾರನಾಥ ಕಾಪಿಕಾಡ್


ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವು ಸುಳ್ಯದ ಪರಿವಾರಕಾನದ ಉಡುಪಿ ಗ್ರ್ಯಾಂಡ್ ಪರಿವಾರ್ ಸಭಾಂಗಣದಲ್ಲಿ ಜು.28ರಂದು ಜರುಗಿತು.

. . . . . . . . .


ಸುಳ್ಯ ತಾಲೂಕು ಯೂನಿಯನ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ತಹಶಿಲ್ದಾರ್ ಅನಂತಶಂಕರ್ ಅವರು ಉದ್ಘಾಟಿಸಿ, ಶುಭಹಾರೈಸಿದರು.
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ತಾರನಾಥ ಗಟ್ಟಿ ಕಾಪಿಕಾಡ್ ಉಪನ್ಯಾಸಕರಾಗಿ ಮಾತನಾಡಿ ಇಂದಿನ ಪರಿಸ್ಥಿತಿಯಲ್ಲಿ ಮಾಧ್ಯಮ ವ್ಯವಸ್ಥೆಯನ್ನು ಅನುಮಾನ ಪಡುವಂತಹ ದೃಷ್ಟಿಯಲ್ಲಿ ಜನಸಾಮಾನ್ಯರು ನೋಡುವಂತಾಗಿದೆ. ಇತ್ತೀಚಿನ ದಿನಗಳಲ್ಲಿ ಕನ್ನಡ ದೃಶ್ಯಮಾಧ್ಯಮಗಳಲ್ಲಿ ಜಿಜ್ಞಾಸೆಯನ್ನು ಉಂಟುಮಾಡುವಂತಹ ವರದಿಗಳನ್ನು ಬಿತ್ತರಿಸುತ್ತಿದ್ದಾರೆ. ಮಾಧ್ಯಮಗಳು ವಿಶ್ವಾಸವನ್ನು ಕಳೆದುಕೊಳ್ಳುತ್ತಿದೆ. ಕೇವಲ ಗ್ರಾಮಾಂತರದ ಪತ್ರಿಕೆಗಳಲ್ಲಿ ಉತ್ತಮ ಕೆಲಸ ಕಾರ್ಯಗಳು ನಡೆಯುತ್ತಿದೆ. ಗಾಳಿಸುದ್ದಿಯನ್ನು ಮಾತ್ರ ಸುದ್ದಿ ಮಾಡುವ ಕಾಲಘಟ್ಟದಲ್ಲಿ ನಾವಿಂದು ಬದುಕುತ್ತಿದ್ದೇವೆ ಎಂದು ಹೇಳಿದರು. ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ತಾ.ಪಂ ಸಿ.ಒ ಭವಾನಿ ಶಂಕರ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು.


ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಬಂಟ್ವಾಳ್‌ ಅಭಿನಂದನಾ ಭಾಷಣ ಮಾಡಿದ್ದರು. ಈ ಸಂದರ್ಭದಲ್ಲಿ ಮಂಗಳೂರಿನ ಹಿರಿಯ ಪತ್ರಕರ್ತ ರಿಚರ್ಡ್‌ ಲಸ್ರಾದೋ, ಹಿರಿಯ ಪತ್ರಿಕಾ ಪ್ರತಿನಿಧಿ ಸಂಕಪ್ಪ ಸಾಲ್ಯಾನ್ ಅಲೆಕ್ಕಾಡಿ, ಹಿರಿಯ ಪತ್ರಿಕಾ ವಿತರಕ ತೇರಪ್ಪ ಮಣಿಯಾಣಿ ಪೆರುವಾಜೆ ಇವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ‌ ಸುಳ್ಯ‌‌ಪ್ರೆಸ್ ಕ್ಲಬ್ ಅಧ್ಯಕ್ಷ ಜೆ.ಕೆ‌ ರೈ, ಸಮಿತಿಯ ಕೋಶಾಧಿಕಾರಿ ಉಮೇಶ್ ಮಣಿ ಕಾರ್ ಮೊದಲಾದವರು ಉಪಸ್ಥಿತರಿದ್ದರು. ನಿಯೋಜಿತ‌ ಕಾರ್ಯದರ್ಶಿ ಯಶ್ವಿತ್ ಕಾಳಮನೆ‌ ಸ್ವಾಗತಿಸಿ, ಕಾರ್ಯದರ್ಶಿ ರಮೇಶ್ ನೀರಬಿದಿರೆ ಕಾರ್ಯಕ್ರಮ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!