Ad Widget

ಡಿಸಿ ಸಿಂಧು ರೂಪೇಶ್ ಗೆ ಜಾಲತಾಣದಲ್ಲಿ ಕೊಲೆ ಬೆದರಿಕೆಯ ಸಂದೇಶ ಹಾಕಿದ್ದ ಬಜ್ಪೆ ನಿವಾಸಿ ಪೊಲೀಸ್ ವಶಕ್ಕೆ

ಮಂಗಳೂರು: ವಾಟ್ಸ್ ಆಪ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಿಂಧು ರೂಪೇಶ್ ಅವರಿಗೆ ಬಹಿರಂಗ ಕೊಲೆ ಬೆದರಿಕೆ ಒಡ್ಡಿದ್ದ ಆರೋಪದಲ್ಲಿ ಮೂಡಬಿದ್ರೆ ಠಾಣಾ ಪೊಲೀಸರು ಬಜ್ಪೆ ನಿವಾಸಿ ರಂಜಿತ್(25) ಎಂಬಾತನನ್ನು ಬಂಧಿಸಿದ್ದಾರೆ. ಮೂಡಬಿದ್ರೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು.
ಗೋಸಾಗಾಟ ಮಾಡುವ ವ್ಯಾಪಾರಿಗಳಿಗೆ ಹಲ್ಲೆ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಿಂಧು ಬಿ. ರೂಪೇಶ್ ಅವರು ಮೊನ್ನೆ ಖಡಕ್ ವಾರ್ನಿಂಗ್ ನೀಡಿದ್ದರು. ಇದನ್ನು ಸಹಿಸದ ಕೆಲ ಕಿಡಿಗೇಡಿಗಳು ವಾಟ್ಸ್ ಆಪ್ ಗ್ರೂಪಲ್ಲಿ ಬಹಿರಂಗವಾಗಿ ಕೊಲೆ ಬೆದರಿಕೆ ಒಡ್ಡಿದ್ದರು. ಆರೋಪಿಗಳನ್ನು ತಕ್ಷಣವೇ ಬಂಧಿಸುವ ಮೂಲಕ ಜಿಲ್ಲೆಯಲ್ಲಿ ಶಾಂತಿ ಕದಡುವ ಕಿಡಿಗೇಡಿಗಳಿಗೆ ಪೊಲೀಸ್ ಇಲಾಖೆ ಸೂಕ್ತ ಸಂದೇಶ ರವಾನಿಸಬೇಕು ಎಂಬ ಆಗ್ರಹ ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬಂದಿತ್ತು.
ವಾಟ್ಸಪ್ ಗ್ರೂಪ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅವರಿಗೆ ಕಾಮೆಂಟ್ ಬರೆದು ಕೊಲೆ ಬೆದರಿಕೆ ಒಡ್ಡಲಾಗಿದೆ. ಇದೇ ಗ್ರೂಪಿನ ಇನ್ನಿತರ ಸದಸ್ಯರು ಕೂಡ ಇದೇ ತರ ಬೆದರಿಕೆ ಹಾಕಿದ್ದಲ್ಲದೆ ಇದೆಲ್ಲವನ್ನು ಅಡ್ಮಿನ್ ನೋಡಿಯೂ ಸುಮ್ಮನಿದ್ದ ಎಂಬ ಆರೋಪ ಕೇಳಿಬಂದಿತ್ತು.
ಕಾಮೆಂಟ್ ಬರೆದಿರುವ ಕಿಡಿಗೇಡಿಯನ್ನು ಕೂಡಲೇ ಪೋಲಿಸರು ಪತ್ತೆ ಹಚ್ಚಿ ಜಿಲ್ಲಾಧಿಕಾರಿಯವರಿಗೆ ರಕ್ಷಣೆ ನೀಡುವ ಮೂಲಕ ಸೂಕ್ತ ಕಾನೂನು ಕ್ರಮ ಜರುಗಿಸಬೇಕಾಗಿದೆ ಎಂದು ನಾಗರಿಕರು ಒತ್ತಾಯಿಸಿದ್ದರು. ಮೂಡಬಿದ್ರೆ ಪೊಲೀಸರು ರಂಜಿತ್ ನನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ನಿನ್ನೆ ಜಿಲ್ಲಾಧಿಕಾರಿ ಅವರನ್ನು ಏಕಾಏಕಿ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಿ ಆದೇಶಿಸಿದ ಸರಕಾರದ ನಡೆ ಬಗ್ಗೆ ಸಂಶಯ ಹುಟ್ಟುಹಾಕಿದೆ. ಈ ಬಗ್ಗೆ ಪರ ವಿರೋಧ ಚರ್ಚೆ ಜಾಲತಾಣದಲ್ಲಿ ಜೋರಾಗಿದೆ.

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!