ಕಳೆದ ಹಲವಾರು ತಿಂಗಳುಗಳಿಂದ ಕೋರೋನಾ ವೈರಸ್ ಹಿನ್ನಲೆಯಲ್ಲಿ ಕೇರಳ ಕರ್ನಾಟಕದ ಗಡಿಭಾಗದ ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಭಂದ ಹೇರಿ ರಸ್ತೆಗೆ ಮಣ್ಣು ಸುರಿಯಲಾಗಿದ್ದು, ಇದರಿಂದ ಸ್ಥಳೀಯ ನಿವಾಸಿಗಳು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಆ.೧ರಂದು ಸುಳ್ಯ ಆತ್ಮನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ಆಗಮಿಸಿದ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಗಡಿಭಾಗದ ಮಣ್ಣು ತೆರವುಗೊಳಿಸುವ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಕ್ರಮಕೈಗೊಳ್ಳುತ್ತೇವೆ. ಈಗಾಗಲೇ ಕೆಲವೆಡೆ ಹಾಕಲಾಗಿದ್ದ ಮಣ್ಣುಗಳನ್ನು ತೆರವು ಮಾಡಲಾಗಿದೆ. ಇನ್ನೂ ಕೆಲವು ಭಾಗಗಳಲ್ಲಿ ಇದೆ ಇದೀಗ ಕೇರಳದವರು ಕೂಡಾ ಗಡಿಯನ್ನು ಮಣ್ಣು ಹಾಕಿ ಮುಚ್ಚಿದ್ದಾರೆ. ಇದರ ಕುರಿತು ಸಂಬಂಧಪಟ್ಟವರೊಂದಿಗೆ ಮಾತನಾಡಲಾಗುವುದು ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರವನ್ನು ನೀಡಿದ್ದಾರೆ. ಅದೇ ರೀತಿ ಸುಳ್ಯ ನಗರ ತ್ಯಾಜ್ಯ ವಿಲೇವಾರಿ ಸಮಸ್ಯೆಯ ಬಗ್ಗೆ ಕೂಡಲೇ ಶಾಸಕರೊಂದಿಗೆ ಸಭೆ ನಡೆಸಿ ಶಾಶ್ವತ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ ಈ ಸಂದರ್ಭದಲ್ಲಿ ಶಾಸಕ ಎಸ್.ಅಂಗಾರ, ಬಿಜೆಪಿ ಮುಖಂಡರುಗಳಾದ ನವೀನ್ ರೈ ಮೇನಾಲ, ಚಂದ್ರಾಕೋಲ್ಚಾರ್, ಸುಭೋಷ್ ಶೆಟ್ಟಿ ಮೇನಾಲ ಮೊದಲಾದವರು ಉಪಸ್ಥಿತರಿದ್ದರು.
- Thursday
- November 21st, 2024