ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಇಂದು ಸುಳ್ಯಕ್ಕೆ ಭೇಟಿ ನೀಡಿದರು. ನೂತನ ಸದಸ್ಯರಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ಸುಳ್ಯ ವಿಧಾನಸಭಾ ಕ್ಷೇತ್ರ ಬೇಟಿ ಮಾಡಿದರು. ಬೆಳಗ್ಗೆ ಕಡಬದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಸುಳ್ಯಕ್ಕೆ ಆಗಮಿಸಿದರು.
ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ಯನ್ನು ಸುಳ್ಯ ಶಾಸಕ ಎಸ್.ಅಂಗಾರ ವಹಿಸಿದ್ದರು. ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಸುಳ್ಯ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ವೆಂಕಟ್ ವಳಲಂಬೆ, ಬಿಜೆಪಿ ಜಿಲ್ಲಾ ಸಮಿತಿಯ ಎ.ವಿ. ತೀರ್ಥರಾಮ, ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಗುರುದತ್ ನಾಯಕ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ವೇದಿಕೆಯಲ್ಲಿದ್ದರು. ಎ.ವಿ. ತೀರ್ಥರಾಮ ಪ್ರಾಸ್ತಾವಿಕ ಮಾತನಾಡಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾಗಿ ನೂತನವಾಗಿ ಆಯ್ಕೆಯಾದ ಪ್ರತಾಪ್ ಸಿಂಹ ನಾಯಕ್ ರನ್ನು ಮಂಡಲ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು. ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ ಸ್ವಾಗತಿಸಿದರು. ನ.ಪಂ.ಸದಸ್ಯ ವಿನಯ್ ಕುಮಾರ್ ಕಂದಡ್ಕ ಕಾರ್ಯಕ್ರಮ ನಿರೂಪಿಸಿದರು.