
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ನಿನ್ನೆ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕುಟುಂಬಸ್ಥರೂ ಕೂಡ ಪರೀಕ್ಷೆಗೆ ಒಳಗಾಗಿದ್ದರು.
ಇದೀಗ ಅವರ ವರದಿ ಬಂದಿದ್ದು, ವರದಿಯಲ್ಲಿ ಸಿಎಂ ಬಿಎಸ್ ವೈ ಪುತ್ರಿ ಪದ್ಮಾವತಿಗೂ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.
ಇನ್ನು ಇಂದು ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರ ವರದಿಯಲ್ಲಿ ಕೊರೊನಾ ನೆಗೆಟಿವ್ ಎಂದು ಬಂದಿದೆ.
ಇಂದು ಯಡಿಯೂರಪ್ಪ ಅವರ ಮೊಮ್ಮಕ್ಕಳು ಪರೀಕ್ಷೆಗೆ ಒಳಪಡಲಿದ್ದಾರೆ.