
ಕನಕಮಜಲಿನ ಅಬೂಬಕ್ಕರ್ ಉಸ್ತಾದ್ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಹೃದಯ ಸಂಬಂಧಿ ತೊಂದರೆಯಿಂದ ಬಳಲುತ್ತಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಅವರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಸಮಸ್ತದ ಹಿರಿಯ ಗುರುಗಳಾಗಿದ್ದು ಅಪಾರ ಅನುಯಾಯಿಗಳನ್ನು ಕುಟುಂಬಸ್ಥರನ್ನು ಅಗಲಿದ್ದಾರೆ.