
ಆ.5 ರಂದು ಅಯೋಧ್ಯೆಯ ರಾಮಜನ್ಮ ಭೂಮಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆಯಲಿರುವ ರಾಮಮಂದಿರದ ಶಿಲಾನ್ಯಾಸ ಕಾರ್ಯಕ್ರಮದ ಅಂಗವಾಗಿ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಶಿಲಾನ್ಯಾಸ ಹಾಗೂ ರಾಮಮಂದಿರ ನಿರ್ಮಾಣ ಕೆಲಸ ಯಾವುದೇ ವಿಘ್ನಗಳಿಲ್ಲದೇ ಸಾಂಗವಾಗಿ ನಡೆಯುವಂತಾಗಲು ವಿಶೇಷ ಪೂಜೆ ,ಪ್ರಾರ್ಥನೆ ಸಲ್ಲಿಸುವಂತೆ ತಿಳಿಸಿದ್ದಾರೆ. ಕೋವಿಡ್ ನಿಯಮ ಪಾಲಿಸಿಕೊಂಡು ಭಕ್ತರಿಗೆ ಅವಕಾಶ ಮಾಡಿಕೊಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
