
ಅಯೋಧ್ಯೆ ಶ್ರೀ ರಾಮ ಮಂದಿರ ಪುನರ್ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸುವ ಈ ಸುಸಂದರ್ಭದಲ್ಲಿ ಭಾಜಪಾ ಸುಳ್ಯ ಮಂಡಲ ಹಾಗೂ ಭಾಜಪಾ ಯುವ ಮೋರ್ಚಾ ಸುಳ್ಯ ಮಂಡಲದ ವತಿಯಿಂದ ಶ್ರೀ ಚೆನ್ನಕೇಶವ ದೇವರ ಸನ್ನಿಧಿಯಲ್ಲಿ, ಹಾಗೂ ಆಂಜನೇಯ ಗುಡಿಯಲ್ಲಿ ಪ್ರಾರ್ಥನೆ ಸಲ್ಲಿಸಿ ನಂತರ ಬೂಡು ಭಗವತಿ ಕ್ಷೇತ್ರದಲ್ಲಿ ಪ್ರಾರ್ಥಿಸಿ ಕ್ಷೇತ್ರದಲ್ಲಿ ಈ ದಿನದ ಸವಿ ನೆನಪಿಗಾಗಿ ಅಶ್ವತ್ಥ ಗಿಡ ನೆಡಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಹರಪ್ರಸಾದ್ ತುದಿಯಡ್ಕ ಹಾಗು ರಾಷ್ಟ್ರೀಯ ಸ್ವಯಸೇವಕ ಸಂಘದ ಸೀತಾರಾಮ್ ಪ್ರಾರ್ಥನೆ ಸಲ್ಲಿಸಿದರು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಗುರುದತ್ ಜಿ ನಾಯಕ್, ಜಿಲ್ಲಾ ಯುವ ಮೋರ್ಚಾ ಸದಸ್ಯ ಕಿಶನ್ ಜಬಳೆ, ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್ ಎ ರಾಮಚಂದ್ರ, ನಗರ ಪಂಚಾಯತ್ ಸದಸ್ಯರಾದ ವಿನಯ್ ಕುಮಾರ್ ಕಂದಡ್ಕ, ಸುಧಾಕರ್ ಕುರುಂಜಿಭಾಗ್, ನಗರ ಪಂಚಾಯತ್ ಮಾಜಿ ಸದಸ್ಯರಾದ ಗೋಪಾಲ್ ನಡುಬೈಲ್, ಸಿ ಎ ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ, ಬೂಡು ರಾಧಾಕೃಷ್ಣ ರೈ, ಶಿವರಾಮ ಕೆರ್ಪಳ ಕೆವಿಜಿಪಿ, ಲಕ್ಷ್ಮೀಶ ದೇವರಕಲಿಯ, ಸುಪ್ರೀತ್ ಮೊಂಟಡ್ಕ, ಗೌತಮ್ ಭಟ್ ಹಳೆಗೇಟು ಮೊದಲಾದವರು ಉಪಸ್ಥಿತರಿದ್ದರು.
