
ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇಲ್ಲಿ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
ಧ್ವಜಾರೋಹಣವನ್ನು ಶಾಲಾ ಸಂಚಾಲಕರಾದ ಶ್ರೀ ಎನ್ ವೆಂಕಟ್ರಮಣ ಭಟ್ ನೆರವೇರಿಸಿದರು. ಮುಖ್ಯಶಿಕ್ಷಕರಾದ ಶ್ರೀ ಯಶೋಧರ ಎನ್ ಶುಭ ಹಾರೈಯಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಹರಿಪ್ರಸಾದ್ ರೈ ಜಿ ಇವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ಈ ಸಂದರ್ಭದಲ್ಲಿ ಎಲ್ಲಾ ಶಿಕ್ಷಕರು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.