
ಸ.ಹಿ.ಪ್ರಾ.ಶಾಲೆ ದರ್ಖಾಸ್ತು ಇಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್.ಡಿ.ಎಂ.ಸಿ ಅಧ್ಯಕ್ಷೆ ಶ್ರೀಮತಿ ಸುಜಾತಾ ನೆರವೇರಿಸಿದರು. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶ್ರೀ ನಟರಾಜ್ ಸ್ವತಂತ್ರ ದಿನೋತ್ಸವ ಭಾಷಣಗೈದರು. ಪ್ರಭಾರ ಮುಖ್ಯಶಿಕ್ಷಕಿ ಶ್ರೀಮತಿ ಪಲ್ಲವಿ ಪಿ ಸ್ವಾಗತಿಸಿ, ಸಹಶಿಕ್ಷಕಿ ಪ್ರೇಮಾ ವಂದಿಸಿದರು. ಈ ಸಂದರ್ಭದಲ್ಲಿ ಶಾಲೆಯ ಹಳೆ ವಿದ್ಯಾರ್ಥಿಗಳು ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು.