


ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇಲ್ಲಿ 74ನೇ ಸ್ವಾತಂತ್ರ್ಯೋತ್ಸವವನ್ನು ಕೊವಿಡ್-19ರ ಕಾರಣ ಸರಳವಾಗಿ ಆಚರಿಸಲಾಯಿತು.
ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಕುರುಂಜಿಭಾಗ್ ಸುಳ್ಯ ಇದರ ಅಧ್ಯಕ್ಷರಾದ ಡಾ.ಕೆ.ವಿ ಚಿದಾನಂದ ರವರು ಧ್ವಜರೋಹಣ ನೆರವೇರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಕೆವಿಜಿ ಮೆಡಿಕಲ್ ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್ ಭಾಗವಹಿಸಿ ದ್ದರು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಕುರುಂಜಿಭಾಗ್ ಸುಳ್ಯ ಇದರ ಕೋಶಾಧಿಕಾರಿ ಶ್ರೀಮತಿ ಶೋಭ ಚಿದಾನಂದ, ಡೈರೆಕ್ಟರ್ ಮಿ.ಅಕ್ಷಯ್ ಕೆ.ಸಿ., ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಲೀಲಾಧರ್ ಡಿ.ವಿ., ಎನ್.ಎಸ್.ಎಸ್. ಘಟಕಾಧಿಕಾರಿ ಡಾ.ಪ್ರಮೋದ್ ಪಿ.ಎ., ಕಛೇರಿ ಅಧೀಕ್ಷಕರಾದ ಚಂದ್ರಕುಮಾರ್ ಕುತ್ಯಾಳ, ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರು ಗಳು ಹಾಗೂ ಎನ್.ಎಸ್. ಎಸ್. ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
