- Friday
- April 4th, 2025

ಮಿತ್ರ ಯುವಕ ಮಂಡಲ (ರಿ) ಕೊಯಿಕುಳಿ ಮತ್ತು ಕುರಲ್ ತುಳು ಕೂಟ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಯುವಕ ಮಂಡಲ ಕಟ್ಟಡದ ಆವರಣದಲ್ಲಿ ನಡೆಯಿತು. ಕೊರೋನ ವಾರಿಯರ್ಸ್ ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ದುಗ್ಗಲಡ್ಕ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಳಿನಿ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ದುಗ್ಗಲಡ್ಕ ಕಿರಿಯ ಆರೋಗ್ಯ ಸಹಾಯಕಿ ಶಶಿಕಲಾ ಭಾಗವಹಿಸಿದ್ದರು. ಯುವಕ...

ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲ್ಪಟ್ಟಿತು. ಸಂಸ್ಥೆಯ ಪ್ರಾಂಶುಪಾಲರಾದರು ಹಸೀನಾ ಬಾನು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಪ್ರಾಂಶುಪಾಲರಾದ ಉಮಾಕುಮಾರಿ, ಉಪನ್ಯಾಸಕರು, ಶಿಕ್ಷಕ ವೃಂದ ಹಾಗೂ ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಮೇದಿನಡ್ಕದಲಿ 74 ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಮುತ್ತು ಮಾರಿಯಮ್ಮ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ದಯಾಳನ್ ಧ್ವಜಾರೋಹಣ ನೆರವೇರಿಸಿದರು. ಮುತ್ತು ಮಾರಿಯಮ್ಮ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ರಾಜಶೇಖರ ಉಪಸ್ಥಿತರಿದ್ದರು. ಹಾಗೂ ಮುತ್ತು ಶ್ರೀ ಫ್ರೆಂಡ್ಸ್ ಕ್ಲಬ್ ಮೇದಿನಡ್ಕ ಯುವಕರು ಹಾಗೂ ಮೇದಿನಡ್ಕ ಸಾರ್ವಜನಿಕರು ಉಪಸ್ಥಿತರಿದ್ದರು. ಸತೀಶ ಮೇದಿನಡ್ಕ ಹಾಗೂ...

ಸ.ಉ.ಹಿ.ಪ್ರಾ.ಶಾಲೆ ಅಯ್ಯನಕಟ್ಟೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯಾಯಿತು. ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಶ್ರೀ ಸತೀಶ್ಚಂದ್ರ ಪಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಶೀಲಾವತಿ, ಶಿಕ್ಷಕ ವೃಂದ ಹಾಗೂ ಪೋಷಕ ವೃಂದದವರು ಉಪಸ್ಥಿತರಿದ್ದರು.

ಕಳಂಜ - ಬಾಳಿಲ ಪ್ರಾ.ಕೃ.ಪತ್ತಿನ ಸಹಕಾರಿ ಸಂಘ ಕೋಟೆಮುಂಡುಗಾರು ಇದರ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಘದ ಅಧ್ಯಕ್ಷರಾದ ಶ್ರೀ ಕೂಸಪ್ಪ ಗೌಡ ಮುಗುಪ್ಪು ಧ್ವಜಾರೋಹಣಗೈದರು.ನಂತರ ಜರುಗಿದ ಸರಳ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬೆಳ್ಳಾರೆ ಆರಕ್ಷಕ ಠಾಣೆಯ ಎಸ್.ಐ. ಶ್ರೀ ಆಂಜನೇಯ ರೆಡ್ಡಿ 'ಕೊರೋನಾ ವಾರಿಯರ್ಸ್' ಗಳಿಗೆ ಅಭಿನಂದನೆ...

ಸುಳ್ಯ ಗೃಹ ರಕ್ಷಕ ದಳ ದ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಸುಳ್ಯ ಗೃಹ ರಕ್ಷಕ ದಳ ಕಚೇರಿ ಮುಂಭಾಗದಲ್ಲಿ ನಡೆಯಿತು. ಗೃಹ ರಕ್ಷಕ ದಳ ಯೂನಿಟ್ ಆಫೀಸರ್ ಲ. ಜಯಂತ್ ಶೆಟ್ಟಿ ಯವರು ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಗೃಹ ರಕ್ಷಕ ದಳ ಸಿಬ್ಬಂದಿಗಳು ಹಾಜರಿದ್ದರು.

ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ ಯವರು ದ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ.ಸಿಬ್ಬಂದಿಗಳು ಉಪಸ್ಥಿತರಿದ್ದರು.

ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ 74ನೇ ಸ್ವಾತಂತ್ರದಿನಾಚರಣೆಯ ದ್ವಜಾರೋಹಣ ಕಾರ್ಯಕ್ರಮ ವನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಾವ್ಯ ಇವರು ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.

ಮುರುಳ್ಯ ಗ್ರಾಮ ಪಂಚಾಯತ್ ನಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಶ್ರೀ ಶ್ರೀಧರ್ ಕೆ ಆರ್ ರವರು ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರ ಗೀತೆಯೊಂದಿಗೆ ಆಚರಣೆಯನ್ನು ಮುಕ್ತಾಯಗೊಳಿಸಲಾಯಿತು. ಈ ಸಂದರ್ಭದಲ್ಲಿಪಂಚಾಯತ್ ನ ಮಾಜಿ ಸದಸ್ಯರು ಶ್ರೀಮತಿ ಯಶೋಧ ಇದುಂಗುಳಿ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಶ್ರೀ ಸೀತಾರಾಮ ಎಸ್ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಶ್ರೀ...

ಅಚ್ರಪ್ಪಾಡಿ ಶಾಲೆಯಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಹರೀಶ್ ಕಡಪಳ ನೆರೆವೇರಿಸಿದರು. ಶಾಲಾ ಹಿತರಕ್ಷಣಾ ಸಮಿತಿಯ ಅಧ್ಯಕ್ಷರು ಬಾಬು ಗೌಡ ಅಚ್ರಪ್ಪಾಡಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ, ವಿಧ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.ಮಕ್ಕಳಿಗೆ ವಾಟ್ಸಪ್ಪ್ ಮೂಲಕ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿಜೇತರಿಗೆ...

All posts loaded
No more posts