- Wednesday
- April 2nd, 2025

ಹರಿಹರವ ಪಲ್ಲತ್ತಡ್ಕ ಕೊಲ್ಲಮೊಗ್ರ ಪ್ರಾ.ಕೃ.ಪ.ಸ.ಸಂಘದ ಕಛೇರಿಯಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ನಿವೃತ್ತ ಉಪನ್ಯಾಸಕರಾದ ರಾಮಚಂದ್ರ ಪಳಂಗಾಯ ಧ್ವಜರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ವಿನೂಪ್ ಮಲ್ಲಾರ ಮತ್ತು ಉಪಾಧ್ಯಕ್ಷರಾದ ಮಣಿಕಂಠ ಕೊಳಗೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಷಪ್ಪ ಗೌಡ ಕಿರಿಭಾಗ, ಸಿಬ್ಬಂದಿ ವರ್ಗ ಮತ್ತು ಸಂಸ್ಥೆಯ ನಿರ್ದೇಶಕರು ಮತ್ತು ಸದಸ್ಯರು ಹಾಜರಿದ್ದರು.

ಮಡಪ್ಪಾಡಿ ಹಿ.ಪ್ರಾ.ಶಾಲೆಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ನಾಗೇಶ್ ಕುಚ್ಚಾಲ ಧ್ವಜಾರೋಹಣ ಗೈದರು. ಈ ಸಂದರ್ಭದಲ್ಲಿ ಗ್ರಾ.ಪಂ.ಮಾಜಿ ಅಧ್ಯಕ್ಷೆ ಶಕುಂತಲಾ ಕೇವಳ,ಶಿಕ್ಷಕರು, ಗ್ರಾ.ಪಂ.ಸಿಬ್ಬಂದಿಗಳು,ಶಿಕ್ಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಚಂದ್ರಶೇಖರ ಪಾರೆಪ್ಪಾಡಿ ಸ್ವಾಗತಿಸಿ, ವಂದಿಸಿದರು.

ಗುತ್ತಿಗಾರು ಬ್ಲೆಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕಿ ಸಿ.ಜಿಜಿ ರೋಸ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. ನಂತರ ಮಾತನಾಡಿದ ಅವರು "ಸ್ವಾತಂತ್ರ್ಯ ದಿನಾಚರಣೆ ಎಲ್ಲಾ ಭಾರತೀಯರ ಹಬ್ಬವಾಗಿದೆ. ಸ್ವಾತಂತ್ರಕ್ಕಾಗಿ ಅನೇಕ ವ್ಯಕ್ತಿಗಳ ಹೋರಾಟದ ಫಲವಾಗಿ ನಾವು ಇಂದು ಸ್ವಚಂದವಾಗಿ, ಸ್ವತಂತ್ರವಾಗಿ ಬದುಕುತ್ತಿದ್ದೇವೆ.ಇಂತಹ ಮಹಾನ್ ಹೋರಾಟಗಾರರನ್ನು ಸದಾ...